ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಕೊರೋನಾದಿಂದಾಗಿ ವರ್ಕ್ ಫ್ರಂ ಹೋಮ್ ವ್ಯವಸ್ಥೆಯನ್ನು ಖಾಸಗಿ ಕಂಪನಿ ಗಳು ಜಾರಿಗೊಳಿಸಿತ್ತು. ಇದೀಗ ಅನೇಕ ಕಂಪನಿಗಳು ಮರಳಿ ಓಪನ್ ಆಗಿದ್ದು, ವರ್ಕ್ ಫ್ರಂ ಹೋಂ ಸಾಕು, ಆಫೀಸಿಗೆ ಬಂದು ಕೆಲಸ ಮಾಡಿ ಎಂದು ಸೂಚನೆ ನೀಡಿದೆ.
ಅದೇ ರೀತಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಕಂಪನಿಯು ಕೂಡ ತಮ್ಮ ಉದ್ಯೋಗಿಗಳಿಗೆ ಮರಳಿ ಬರಲು ಸೂಚನೆ ನೀಡಿದ್ದು, ಆದ್ರೆ ಇತ್ತ ಮಹಿಳಾ ಟೆಕ್ಕಿಗಳು (Women Techies) ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಹೌದು. ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಕಂಪನಿಯು ಉದ್ಯೋಗಿಗಳಿಗೆ ಕಳೆದ ಮೂರು ವರ್ಷಗಳಿಂದ ಮನೆಯಿಂದ ಕಲಸ ಮಾಡುತ್ತಿದ್ದೀರ. ಇನ್ಮೇಲೆ ಕಡ್ಡಾಯವಾಗಿ ಆಫೀಸಿಗೆ ಬಂದು ಕೆಲಸ ಮಾಡುವಂತೆ ಕಂಪನಿ ಹೇಳಿದೆ. ಈ ಸೂಚನೆ ಹೊರ ಬೀಳುತ್ತಿದ್ದಂತೆಯೇ ಮಹಿಳಾ ಟೆಕ್ಕಿಗಳು ರಾಜೀನಾಮೆ ನಿರ್ಧಾರ ತೆಗೆದುಕೊಂಡಿರುವುದಾಗಿ ವರದಿಯಾಗಿದೆ.
ಈ ಸಂಬಂಧ ಟಿಸಿಎಸ್ ಮಾನವ ಸಂಪನ್ಮೂಲ ಮುಖ್ಯಸ್ಥ ಮಿಲಿಂದ್ ಲಕ್ಕಡ್ (Milind Lakkad) ಮಾತನಾಡಿ, ಕಂಪನಿಯು ಮನೆಯಿಂದಲೇ ಕೆಲಸ ಮಾಡಿದ್ದು ಸಾಕು, ಕಚೇರಿಗೆ ಬಂದು ಕಾರ್ಯ ನಿರ್ವಹಿಸಿ ಎಂದು ಹೇಳಿದ ನಂತರ ಅನೇಕ ಮಂದಿ ಉದ್ಯೋಗಿಗಳಿಂದ ರಾಜೀನಾಮೆ ಪತ್ರಗಳು ಬಂದವು. ಅದರಲ್ಲಿ ಹೆಚ್ಚಿನದ್ದು ಮಹಿಳೆಯರ ರಾಜೀನಾಮೆ ಪತ್ರಗಳೇ ಆಗಿವೆ. ಆದರೆ ಈ ಮಹಿಳಾ ಉದ್ಯೋಗಿಗಳ ರಾಜೀನಾಮೆಯು ತಾರತಮ್ಯದಿಂದ ಪ್ರೇರಿತವಾಗಿಲ್ಲ. ಸಾಮಾನ್ಯವಾಗಿ ಟಿಸಿಎಸ್ ಕಂಪನಿಯಲ್ಲಿ ಹಿಂದೆಲ್ಲ ಪುರುಷರಿಗಿಂತ ಮಹಿಳೆಯರು ರಾಜೀನಾಮೆ ನೀಡುವ ಪ್ರಮಾಣ ಕಡಿಮೆ ಇತ್ತು. ಆದರೆ ಈ ಬಾರಿ ಮಾತ್ರ ಪುರುಷರಿಗಿಂತ ಮಹಿಳೆಯರೇ ಹೆಚ್ಚು ರಾಜೀನಾಮೆ ಕೊಟ್ಟಿದ್ದಾರೆ. ರಾಜೀನಾಮೆಗೆ ಬೇರೆ ಬೇರೆ ಕಾರಣಗಳಿರಬಹುದಾದರೂ ಪ್ರಮುಖ ಕಾರಣ ಮಾತ್ರ ವರ್ಕ್ ಫ್ರಂ ಹೋಂ (Work From Home) ರದ್ದತಿ ಎಂಬುದು ಹೇಳಿದ್ದಾರೆ.
ಟಿಸಿಎಸ್ ನಲ್ಲಿ 6,00,000 ಕ್ಕೂ ಹೆಚ್ಚು ಜನರು ಕೆಲಸ ಮಾಡುತ್ತಾರೆ. ಅದರಲ್ಲಿ 35% ಮಹಿಳಾ ಉದ್ಯೋಗಿಗಳಿದ್ದಾರೆ. ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶವನ್ನು ಕಂಪನಿ ನಿಲ್ಲಿಸಿದ ನಂತರ ರಾಜೀನಾಮೆಗಳನ್ನು ನೀಡುತ್ತಿದ್ದಾರೆ ಎಂದು ಅವರು ತಿಳಿಸಿದರು.