Tuesday, September 30, 2025

ಬಿಗ್ ಬಾಸ್ ಮನೆಗೆ ಬಂದ ಕೆಲವೇ ಗಂಟೆಗಳಲ್ಲಿ ರಕ್ಷಿತಾ ಶೆಟ್ಟಿ ಎಲಿಮಿನೇಟ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಗ್ ಬಾಸ್ ಕನ್ನಡ ಸೀಸನ್ 12 ಶುರುವಾದ ಮೊದಲ ದಿನವೇ ಬಿಗ್ ಟ್ವಿಸ್ಟ್ ನೀಡಲಾಗಿದೆ. ಡೊಡ್ಮನೆಯೊಳಗೆ ಕಾಲಿಟ್ಟ ಅತ್ಯಂತ ಕಿರಿಯ ಸ್ಪರ್ಧಿ ರಕ್ಷಿತಾ ಶೆಟ್ಟಿ ಮನೆಯೊಳಗೆ ಕಾಲಿಟ್ಟ ಕೆಲವೇ ಗಂಟೆಗಳಲ್ಲಿ ಎಲಿಮಿನೇಟ್ ಆಗಿ ಆಚೆ ಬಂದಿದ್ದಾರೆ.

ತುಳುನಾಡಿನಿಂದ ಬಂದ ಯೂಟ್ಯೂಬರ್ ರಕ್ಷಿತಾ ಶೆಟ್ಟಿ ಅವರಿಗೆ ಗೇಟ್​ ಪಾಸ್ ನೀಡಲಾಗಿದೆ. ಇದರಿಂದ ಎಲ್ಲರಿಗೂ ಶಾಕ್ ಆಗಿದೆ. ಮೊದಲ ದಿನವೇ ಬಿಗ್ ಬಾಸ್ ಎಲಿಮಿನೇಷನ್ ನಡೆಯುತ್ತದೆ ಎಂದು ಯಾರೂ ಊಹಿಸಿರಲಿಲ್ಲ.

6 ಸ್ಪರ್ಧಿಗಳು ಒಂಟಿಗಳಾಗಿ, 5 ಸ್ಪರ್ಧಿಗಳು ಜಂಟಿಗಳಾಗಿ ಹಾಗೂ 3 ಸ್ಪರ್ಧಿಗಳು ಅತಂತ್ರರಾಗಿ ಬಿಗ್ ಬಾಸ್ ಮನೆಗೆ ಪ್ರವೇಶ ಮಾಡಿದ್ದರು. ರಕ್ಷಿತಾ ಶೆಟ್ಟಿ, ಮಾಳು ನಿಪನಾಳ, ಸ್ಪಂದನಾ ಅವರು ಅತಂತ್ರ ಸ್ಥಿತಿಯಲ್ಲಿ ಇದ್ದರು. ಆ ಮೂವರಲ್ಲಿ ಇಬ್ಬರನ್ನು ಉಳಿಸಬೇಕು, ಒಬ್ಬರನ್ನು ಹೊರಗೆ ಕಳಿಸಬೇಕು ಎಂಬ ಪರಿಸ್ಥಿತಿ ನಿರ್ಮಾಣ ಆಯಿತು. ಈ ನಿರ್ಧಾರವನ್ನು ತೆಗೆದುಕೊಳ್ಳುವ ಅಧಿಕಾರವನ್ನು 6 ಒಂಟಿಗಳಿಗೆ ನೀಡಲಾಯಿತು.

ಆರು ಒಂಟಿಗಳ ಎದುರು ನಿಂತು ರಕ್ಷಿತಾ ಶೆಟ್ಟಿ, ಮಾಳು ನಿಪನಾಳ ಹಾಗೂ ಸ್ಪಂದನಾ ಅವರು ತಮ್ಮ ಸಾಮರ್ಥ್ಯದ ಬಗ್ಗೆ ಮನವೊಲಿಸಲು ಪ್ರಯತ್ನಿಸಿದರು.

ಅಂತಿಮವಾಗಿ ಅಶ್ವಿನಿ ಗೌಡ ಅವರು ಎಲ್ಲರ ಪರವಾಗಿ ನಿರ್ಧಾರ ಘೋಷಿಸಿದರು. ಮಾಳು ನಿಪನಾಳ ಮತ್ತು ಸ್ಪಂದನಾ ಅವರನ್ನು ಉಳಿಸಿಕೊಂಡು ರಕ್ಷಿತಾ ಶೆಟ್ಟಿಗೆ ಗೇಪ್​ ಪಾಸ್ ನೀಡಲಾಯಿತು. ಹೆಚ್ಚೇನೂ ಎಮೋಷನಲ್ ಆಗದೇ ರಕ್ಷಿತಾ ಶೆಟ್ಟಿ ಅವರು ಮುಖ್ಯದ್ವಾರದಿಂದ ಹೊರನಡೆದರು.