ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಗ್ಪುರದಲ್ಲಿ ನಡೆದ ಹಿಂಸಾಚಾರ ಯೋಜಿತ ಘಟನೆಯಾಗಿರಬಹುದು ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಈ ಕುರಿತು ಮಾತನಾಡಿ, ಕೆಲವರು ಪೂರ್ವ ಯೋಜಿತ ರೀತಿಯಲ್ಲಿ ದಾಳಿ ಮಾಡಿದ್ದಾರೆ. ಕಲ್ಲುಗಳು ಮತ್ತು ಶಸ್ತ್ರಾಸ್ತ್ರಗಳಿಂದ ತುಂಬಿದ ಟ್ರಾಲಿಯನ್ನು ಪ್ರದೇಶದಿಂದ ವಶಪಡಿಸಿಕೊಳ್ಳಲಾಗಿದೆ. ಘಟನೆಯ ವೇಳೆ ಆಯ್ದ ಮನೆಗಳನ್ನು ಮಾತ್ರವೇ ಗುರಿಯಾಗಿಸಲಾಗಿತ್ತು ಎಂದು ಹೇಳಿದ್ದಾರೆ.
ಮಹಾರಾಷ್ಟ್ರಕ್ಕೆ ಬಂಡವಾಳ ಹೂಡಿಕೆ ಬರುತ್ತಿದೆ. ನಮ್ಮಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಇದ್ದರೆ ಮಾತ್ರ ನಾವು ಬಂಡವಾಳವನ್ನು ಉಳಿಸಿಕೊಳ್ಳಬಲ್ಲೆವು. ಯಾರೇ ಗಲಭೆ ಮಾಡಿದರು, ಅವರನ್ನು ಕ್ಷಮಿಸಲಾಗುವುದಿಲ್ಲ ಎಂದು ಎಚ್ಚರಿಸಿದರು.