ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಬಾಗಲಕೋಟೆ:
ದೇವರ ದರ್ಶನಕ್ಕೆ ಬಂದು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಶಿವಯೋಗ ಮಂದಿರದಲ್ಲಿ ನಡೆದಿದೆ.
ಮೃತರನ್ನು ವಿಶ್ವನಾಥ್ ಮಾವಿನ ಮರದ್ (40), ಪತ್ನಿ ಶ್ರಿದೇವಿ ಮಾವಿನಮರದ್ (32) ಹಾಗೂ ಮಗಳು ನಂದಿನಿ ಮಾವಿನಮರದ್ (12) ಎಂದು ಗುರುತಿಸಲಾಗಿದೆ. ಇವರು ಮೂಲತಃ ಗುಳೇದಗುಡ್ಡ ತಾಲೂಕಿನ ಕೊಟೇಕಲ್ ಗ್ರಾಮದವರಾಗಿದ್ದು, ಗದಗ್ ಜಿಲ್ಲೆಯ ರೋಣದಲ್ಲಿ ವಾಸವಾಗಿದ್ದರು.
ಬಾದಾಮಿಯ ಬನಶಂಕರಿ ದೇವಿ ದೇವಸ್ಥಾನಕ್ಕೆ ತೆರಳಿ ದೇವಿ ದರ್ಶನ ಪಡೆದಿದ್ದರು. ನಂತರ ಬಾದಾಮಿ ತಾಲೂಕಿನ ಶಿವಯೋಗಮಂದಿರಕ್ಕೆ ತೆರಳಿದರು. ಉಪಹಾರ ಸೇವಿಸಲು ಶಿವಯೋಗಮಂದರ ಮಲಪ್ರಭಾ ನದಿ ದಡದಲ್ಲಿ ಕೂತಿದರು.
ಊಟ ಮಾಡಿ ನಂದಿನಿ ಮಾವಿನಮರದ್ ನದಿಯಲ್ಲಿ ಕೈ ತೊಳೆಯಲು ಹೋಗಿ, ಜಾರಿ ನದಿಗೆ ಬಿದ್ದಿದ್ದಾರೆ. ಅವರನ್ನ ರಕ್ಷಿಸಲು ಪತಿ ವಿಶ್ವನಾಥ್, ಶ್ರೀದೇವಿ ನದಿಗೆ ಹಾರಿದ್ದಾರೆ.
ಸ್ಥಳೀಯ ಈಜುಗಾರರು ಹಾಗೂ ಅಗ್ನಿಶಾಮಕ ಸಿಬ್ಬಂದಿಯಿಂದ ಹುಡುಕಾಟ ನಡೆಸಿ ಶ್ರಿದೇವಿ ಮಾವಿನಮರದ್ ಅವರ ಶವ ಹೊರಕ್ಕೆ ತೆಗೆಯಲಾಗಿದ್ದು, ಆದರೆ ವಿಶ್ವನಾಥ್ ಹಾಗೂ ಮಗಳು ನಂದಿನಿ ನೀರಲ್ಲಿ ಕೊಚ್ಚಿ ಹೋಗಿದ್ದಾರೆ. ಸ್ಥಳಕ್ಕೆ ಬಾದಾಮಿ ಪಿ.ಎಸ್.ಐ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.