ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಕ್ರಿಕೆಟ್ ತಂಡದ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಜ.19ರಿಂದ ಆರಂಭವಾಗಬೇಕಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಒಡಿಯ ಸರಣಿ ಪಂದ್ಯಗಳಲ್ಲಿ ವಾಷಿಂಗ್ಟನ್ ಸುಂದರ್ ಭಾಗಿಯಾಗುವುದು ಅನುಮಾನವಾಗಿದೆ.
ನಾಳೆ ಬೆಳಗ್ಗೆ ಎಲ್ಲಾ ಆಟಗಾರರು ದಕ್ಷಿಣ ಆಫ್ರಿಕಾಕ್ಕೆ ತೆರಳಬೇಕಿದೆ. ಸುಂದರ್ ಅವರು 10 ತಿಂಗಳ ವಿರಾಮದ ಬಳಿಕ 2021ರಲ್ಲಿ ಇಂಗ್ಲೆಂಡ್ ವಿರುದ್ದ ಸ್ವದೇಶಿ ಸರಣಿ ಆಡಿದ್ದರು. ಆದರೆ ಇಂಜುರಿಯಾದ ಕಾರಣ ಐಪಿಎಲ್ ನಿಂದ ಹೊರಗುಳಿದಿದ್ದರು.
ವಿಜಯ್ ಹಜಾರೆ ಟ್ರೋಫಿ ಟೂರ್ನಿ ಆಡಿದ ಬಳಿಕ ಸುಂದರ್ ಅವರ ಗಮನಾರ್ಹ ಸಾಧನೆಯ ಬಳಿಕ ಅವರನ್ನು ದಕ್ಷಿಣ ಆಫ್ರಿಕಾದ ಪಂದ್ಯಕ್ಕೆ ಆಯ್ಕೆ ಮಾಡಲಾಗಿತ್ತು.