ಹೊಸದಿಗಂತ ಡಿಜಿಟಲ್ ಡೆಸ್ಕ್:
ನಂಜುಡೇಶ್ವರ ಉತ್ಸವ ಮೂರ್ತಿಗೆ ಎಂಜಲು ನೀರು ಎರಚಲಾಗಿದೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ನಂಜನಗೂಡಿನಲ್ಲಿ ಭಕ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಶ್ರೀಕಂಠೇಶ್ವರ ಭಕ್ತ ಮಂಡಳಿ ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ.
ಅಂಧಕಾಸುರ ಸಂಹಾರಕ್ಕೆ ದಲಿತ ಸಂಘರ್ಷ ಸಮಿತಿ ವಿರೋಧ ವ್ಯಕ್ತಪಡಿಸಿ ತಮ್ಮ ಕೈಯಲ್ಲಿದ್ದ ಅರ್ಧ ಕುಡಿದಿದ್ದ ನೀರಿನ ಬಾಟಲಿಗಳನ್ನು ದೇವರತ್ತ ತೂರಿದ್ದಾರೆ. ಇಷ್ಟು ವರ್ಷಗಳಲ್ಲಿ ಹಿಂದೆಂದೂ ಈ ರೀತಿ ನಡೆದಿಲ್ಲ ನಮಗೆ ನ್ಯಾಯ ಬೇಕು ಎಂದು ಅರ್ಚಕರು ಕಣ್ಣೀರಿಟ್ಟಿದ್ದಾರೆ.