ಹೊಸ ದಿಗಂತ ವರದಿ, ಮೈಸೂರು:
ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತೆ ಆದೇಶ ನೀಡಿದೆ. ಕಾವೇರಿ ವಿವಾದ ವಿಚಾರದಲ್ಲಿ ಪ್ರತಿ ಬಾರಿಯೂ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ಕೂಡಲೇ ತಮಿಳುನಾಡಿಗೆ ನೀರು ಬಿಡುವುದನ್ನ ಸರ್ಕಾರ ನಿಲ್ಲಿಸಬೇಕೆಂದು ಆಗ್ರಹಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಮುಖ್ಯಸ್ಥ ವಾಟಾಳ್ ನಾಗರಾಜ್ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಹಾರ್ಡಿಂಜ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಅವರು, ಕೇಂದ್ರ ಸರ್ಕಾರ ಮತ್ತು ಕಾವೇರಿ ನ್ಯಾಯಾ ಮಂಡಳಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಾವೇರಿ ನೀರಿ ನಿರ್ವಹಣಾ ಮಂಡಳಿ ತಮಿಳುನಾಡು ಸರ್ಕಾರದ ಏಜೆಂಟ್ ರೀತಿ ವರ್ತಿಸುತ್ತಿದೆ. ಪ್ರತಿ ಬಾರಿಯೂ ಕೂಡ ಕರ್ನಾಟಕಕ್ಕೆ ಬಹಳ ಅನ್ಯಾಯ ಮಾಡುತ್ತಿದೆ. ಈ ಕೂಡಲೇ ಕಾವೇರಿ ಪ್ರಾಧಿಕಾರವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.