Thursday, September 29, 2022

Latest Posts

ಬೀದಿ ನಾಯಿಗಳ ಕಾಟ: ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುವಾಗ ಜೊತೆಗೆ ಬಂದೂಕು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೀದಿ ನಾಯಿಗಳ ಹಾವಳಿಯಿಂದ ಬೇಸತ್ತು ಕೇರಳದ ಓರ್ವವ್ಯಕ್ತಿ ತನ್ನ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುವಾಗ ಬಂದೂಕನ್ನು ಜೊತೆಗೆ ತೆಗೆದುಕೊಂಡು ಹೋಗುವಷ್ಟರ ಮಟ್ಟಿಗೆ ಪರಿಸ್ಥಿತಿ ಹದಗೆಟ್ಟಿದೆ.

ಅತಿಯಾದ ಬೀದಿ ನಾಯಿಗಳ ಹಾವಳಿಯಿಂದಾಗಿ ತಮ್ಮ ಮಕ್ಕಳ ರಕ್ಷಣೆ ಮಾಡುತ್ತಿರುವ ಈ ಘಟನೆಯ ವಿಡಿಯೊ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಈ ಬಗ್ಗೆ ಮಾತನಾಡಿದ ಸ್ಥಳೀಯ ವ್ಯಕ್ತಿ, ಇತ್ತೀಚಿನ ದಿನಗಳಲ್ಲಿ ನಮ್ಮ ಪರಿಸರದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ಹೆಚ್ಚಿನ ಮಕ್ಕಳು ಶಾಲೆಗೆ ಹೋಗುವುದನ್ನೆ ನಿಲ್ಲಿಸಿದ್ದಾರೆ. ಅಲ್ಲದೇ ಮದರಸಾದಿಂದ ಬರುತ್ತಿದ್ದ ಓರ್ವ ವಿದ್ಯಾರ್ಥಿನಿಗೆ ಬೀದಿ ನಾಯಿ ಕಚ್ಚಿದೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!