ಪಾಕಿಸ್ತಾನದ ಮಾಲ್‌ವೊಂದರಲ್ಲಿ ಭಾರೀ ಅಗ್ನಿ ಅವಘಡ: ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿಯ ಜ್ವಾಲೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿರುವ ಸೆಂಟಾರಸ್ ಮಾಲ್‌ನ ಮೂರನೇ ಮಹಡಿಯಲ್ಲಿ ತಡರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಗಳು ತಿಳಿಸಿವೆ. ಕಟ್ಟಡದ ಮೇಲಿನ ವಿಭಾಗದಲ್ಲಿರುವ ವಸತಿ ಅಪಾರ್ಟ್‌ಮೆಂಟ್‌ಗಳು ಸೇರಿದಂತೆ ಇತರ ಮಹಡಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ʻದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ʼ ವರದಿ ಮಾಡಿದೆ.

ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದ್ದು, ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಿಯಂತ್ರಿಸಲು ಘಟನೆಯ ಸ್ಥಳಕ್ಕೆ ಧಾವಿಸಿ ಎರಡು ಗಂಟೆಗಳ ಸುದೀರ್ಘ ಕಾರ್ಯಾಚರಣೆ ಬಳಿಕ ಬೆಂಕಿಯನ್ನು ನಂದಿಸಲಾಯಿತು ಎಂದು ವರದಿಯಾಗಿದೆ.

ರಕ್ಷಣಾ ತಂಡಗಳ ಆಗಮನದಲ್ಲಿ ವಿಳಂಬವಾದ್ದರಿಂದ ಕಟ್ಟಡದ ಮೂರನೇ ಮಹಡಿಯಿಂದ ಮೊದಲ ಮಹಡಿ ಹಾಗೂ ವಸತಿ ಅಪಾರ್ಟ್‌ಮೆಂಟ್‌ಗಳು ವಿಭಾಗಗಳಿಗೆ ಬೆಂಕಿ ವೇಗವಾಗಿ ಹರಿಡದೆ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!