ಸಿನಿಮಾವನ್ನು ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಿ: ಜೈಲಿಂದಲೇ ಅಭಿಮಾನಿಗಳಿಗೆ ದರ್ಶನ್ ಸಂದೇಶ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಗುರುವಾರ ರಾತ್ರಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದು, ಇದೀಗ ಎರಡೇ ದಿನಕ್ಕೆ ಜೈಲಿನಿಂದಲೇ ತಮ್ಮ ಅಭಿಮಾನಿಗಳಿಗೆ ಸಂದೇಶವೊಂದನ್ನು ದರ್ಶನ್ ರವಾನಿಸಿದ್ದಾರೆ.

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಸಂದೇಶವನ್ನು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.
‘ಎಲ್ಲರಿಗು ನಮಸ್ಕಾರ, ನಾನು ವಿಜಯಲಕ್ಷ್ಮಿ ದರ್ಶನ್. ನಿಮ್ಮ‌ ಪ್ರೀತಿಯ ದರ್ಶನ್ ರವರು ನಿಮಗೆ ಕಳಿಸಿರುವ ಸಂದೇಶ’ ಎಂದು ವಿಜಯಲಕ್ಷ್ಮಿ ಇನ್​ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

‘ಕನ್ನಡ ಕಲಾಭಿಮಾನಿಗೆ ಹಾಗೂ ನನ್ನ ಸೆಲೆಬ್ರಿಟಿಗಳಿಗೆ ಈ ನಿಮ್ಮ‌ ಪ್ರೀತಿಯ ದಾಸನ ಶಿರ ಸಾಷ್ಟಾಂಗ ನಮಸ್ಕಾರಗಳು. ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ‌ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ. ನಾನು ಎಲ್ಲೆ ಇದ್ದರು ಹೇಗೆ ಇದ್ದರು ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ. ಪ್ರಸಕ್ತ ವಿದ್ಯಮಾನ ಏನೇ ಇದ್ದರು, ನನ್ನ ನಂಬಿ‌ ಕನಸು ಕಂಡಿರುವ ನಿರ್ದೇಶಕರ ಹಾಗು ನನ್ನ ಮೇಲೆ ಕೊಟ್ಯಂತರ ಹಣ ಹೂಡಿರುವ ನಿರ್ಮಾಪಕರ ಬೆಂಬಲವಾಗಿ ನಿಲ್ಲಬೇಕಾದ್ದು ನನ್ನ ಆದ್ಯ ಕರ್ತವ್ಯ , ಹಾಗಾಗಿ ನನ್ನ “ ದಿ ಡೆವಿಲ್ “ ಚಿತ್ರದ ಎಲ್ಲಾ ಕೆಲಸ ಕಾರ್ಯಗಳು ಯಾವುದೆ ಅಡೆತಡೆ ಇಲ್ಲದೆ ಸಾಗಲಿ ಎಂಬುಂದು ನನ್ನ ಆಶಯ, ಹಾಗಾಗಿ ಅದಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ಈ ಮೂಲಕ ತಿಳಿಸುತ್ತೇದ್ದೇನೆ. ಹಾಗು ಇದಕ್ಕೆ ನನ್ನ ಸೆಲೆಬ್ರಿಟಿಗಳ ಸಹಮತವಿದೆಯೆಂದು ಧೃಡವಾಗಿನಂಬಿದ್ದೇನೆ. ಸಿನಿಮಾ ಒಂದು ಮನರಂಜನೆಯ ಮಾಧ್ಯಮ ಅದನ್ನ ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು. ನಿಮ್ಮ ಪ್ರೀತಿಯ ದಾಸ’ ಎಂದು ದರ್ಶನ್ ಸಂದೇಶ ನೀಡಿದ್ದಾರೆ.

ಈ ಸಂದೇಶದ ಮೂಲಕ ‘ಡೆವಿಲ್’ ಸಿನಿಮಾ ಕೆಲವೇ ವಾರಗಳಲ್ಲಿ ಬಿಡುಗಡೆ ಆಗಲಿದೆ. ತಾವು ಒಳಗಿದ್ದರೂ, ಹೊರಗಿದ್ದರೂ ಸಿನಿಮಾ ಅನ್ನು ಗೆಲ್ಲಿಸುವಂತೆ ಪರೋಕ್ಷವಾಗಿ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!