ಹೊಸದಿಗಂತ ವರದಿ, ಶಿವಮೊಗ್ಗ:
ಕೋವಿಡ್ ಹರಡದಂತೆ ತಡೆಯಲು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಿಗಾ ಇರಿಸಬೇಕು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಸೂಚಿಸಿದರು.
ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ನಿಯಂತ್ರಣ ಕುರಿತು ವಿವಿಧ ಇಲಾಖಾ ಅಧಿಕಾರಿಗಳ ಹಾಗೂ ತಜ್ಞ ವೈದ್ಯರ ಸಭೆಯಲ್ಲಿ ಮಾತನಾಡಿದರು.
ಸರ್ಕಾರದ ಮಾರ್ಗಸೂಚಿ ಪ್ರಕಾರ ಶಾಲಾ ಕಾಲೇಜುಗಳನ್ನು ನಡೆಸಬೇಕು. ಪಾಸಿಟಿವ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುವ ವಿದ್ಯಾ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಅವರ ಅನುಮತಿ ಪಡೆದ ಬಳಿಕ ರಜೆ ನೀಡಬಹುದಾಗಿದೆ. ಅನಾರೋಗ್ಯದಿಂದ ಗೈರು ಹಾಜರಾಗುವ ವಿದ್ಯಾರ್ಥಿಗಳಿಗೆ ಹಾಜರಾತಿಯನ್ನು ಕಡ್ಡಾಯಗೊಳಿಸಬಾರದು. ಶಾಲೆಗೆ ಆಗಮಿಸುವ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿರಂತರ ನಿಗಾ ವಹಿಸಬೇಕು ಎಂದು ತಿಳಿಸಿದರು.