ಕಿಕ್ ಸ್ಕೂಟರ್‌ನಲ್ಲಿ ಎಂಜಾಯ್ ಮಾಡುತ್ತಿರುವ ರೋಹಿತ್ ಶರ್ಮಾ…ವಿಡಿಯೋ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಾಳೆಯಿಂದ ಯುಎಇ ಮೈದಾನದಲ್ಲಿ ಆರಂಭವಾಗಲಿರುವ ಏಷ್ಯಾ ಕಪ್ ನಲ್ಲಿ ಆಡಲು ಟೀಂ ಇಂಡಿಯಾ ಸಜ್ಜಾಗಿದೆ. ನಾಡಿದ್ದು, ಭಾರತ-ಪಾಕ್ ಪಂದ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟಿಗರು ಅಭ್ಯಾಸ ನಡೆಸಿದರು. ಅಭ್ಯಾಸದ ಕೊನೆಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕಿಕ್ ಸ್ಕೂಟರ್ ಸವಾರಿ ಮಾಡುತ್ತಿರುವ ವಿಡಿಯೋವನ್ನು ಬಿಸಿಸಿಐ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.

ಅಲ್ಲದೆ, ಟೀಂ ಇಂಡಿಯಾ ಅಭ್ಯಾಸ ನಡೆಸುತ್ತಿದ್ದ ವೇಳೆ ತೆಗೆದ ವಿಡಿಯೋವನ್ನೂ ಸಹ ಬಿಸಿಸಿಐ ಪೋಸ್ಟ್ ಮಾಡಿದೆ. ಏಷ್ಯಾ ಕಪ್ ಟೂರ್ನಿ ಯುಎಇಯಲ್ಲಿ ನಾಳೆಯಿಂದ ಸೆಪ್ಟೆಂಬರ್ 11ರವರೆಗೆ ನಡೆಯಲಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಈ ಟೂರ್ನಿಯನ್ನು ಆಡಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!