ಕಿವೀಸ್‌ ವಿರುದ್ಧ ಶತಕ ಸಿಡಿಸಿ ಅಬ್ಬರಿಸಿದ ಸೂರ್ಯ! ಬೃಹತ್‌ ಮೊತ್ತ ಕಲೆಹಾಕಿದ ಟೀಂ ಇಂಡಿಯಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ಬೇ ಓವಲ್‌ನ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತದ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅಕ್ಷರಶಃ ಅಬ್ಬರಿಸಿದ್ದಾರೆ. ಕೇವಲ 51 ಎಸೆತಗಳಲ್ಲಿ 7 ಸಿಕ್ಸರ್ ಹಾಗೂ 11 ಬೌಂಡರಿಗಳ ನೆರವಿನಿಂದ ಭರ್ಜರಿ 111 ರನ್ ಸಿಡಿಸಿ ನ್ಯೂಜಿಲೆಂಡ್‌ ಬೌಲರ್‌ ಗಳ ಬೆವರಿಳಿಸಿದ್ದಾರೆ.
ನಂ.1 ಟಿ 20 ಬ್ಯಾಟ್ಸ್‌ ಮನ್ ಸೂರ್ಯಕುಮಾರ್ ಗೆ ಪ್ರಸಕ್ತ ವರ್ಷದಲ್ಲಿ ಇದು ಅವರ ಎರಡನೇ ಟಿ 20 ಶತಕವಾಗಿದೆ. ಅವರ ಮೊದಲ ಶತಕವು ಈ ವರ್ಷವೇ ಇಂಗ್ಲೆಂಡ್ ವಿರುದ್ಧ ಬಂದಿತು.
ಜೊತೆಗೆ ಸೂರ್ಯಕುಮಾರ್ ಯಾದವ್ ಒಂದೇ ವರ್ಷದಲ್ಲಿ ಎರಡು ಟಿ20 ಶತಕಗಳನ್ನು ಗಳಿಸಿದ ಎರಡನೇ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ 2018ರಲ್ಲಿ ರೋಹಿತ್ ಶರ್ಮಾ ಈ ಸಾಧನೆ ಮಾಡಿದ್ದರು. ಜೊತೆಗೆ ಟಿ20ಯಲ್ಲಿ 100 ಬೌಂಡರಿಗಳನ್ನು ಪೂರೈಸಿದ ದಾಖಲೆಯನ್ನು ಸೂರ್ಯ ಬರೆದಿದ್ದಾರೆ.
ಇದಕ್ಕೂ ಮೊದಲು ಟಾಸ್ ಗೆದ್ದ ಕೇನ್ ವಿಲಿಯಮ್ಸನ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು. ಸೂರ್ಯ ಸಿಡಿಲಬ್ಬರದ ಬಲದಿಂದ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 191/6 ರನ್‌ ಕಲೆಹಾಕಿತು. ನ್ಯೂಜಿಲೆಂಡ್ ಪರ ಟಿಮ್ ಸೌಥಿ ಹ್ಯಾಟ್ರಿಕ್ ವಿಕೆಟ್ ಪಡೆದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!