ಉತ್ತರ ಪ್ರದೇಶದಲ್ಲಿ ವಾಚ್‌ಟವರ್ ಕುಸಿತ: 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ವಾಚ್‌ಟವರ್ ಕುಸಿದಿದ್ದು, ಘಟನೆಯಲ್ಲಿ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಬಾಗ್ಪತ್ ಜಿಲ್ಲೆಯ ಬರೌತ್ ನಗರದಲ್ಲಿ ಜೈನ ಸಮುದಾಯ ಆಯೋಜಿಸಿದ್ದ ‘ಲಡ್ಡು ಮಹೋತ್ಸವ’ದ ವೇಳೆ ಈ ಘಟನೆ ನಡೆದಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಪೊಲೀಸ್ ಆಡಳಿತವು ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ.

ಘಟನೆಯಲ್ಲಿ 2-3 ಜನರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬಾಗ್‌ಪತ್ ಪೊಲೀಸ್ ವರಿಷ್ಠಾಧಿಕಾರಿ ಅರ್ಪಿತ್ ವಿಜಯವರ್ಗಿಯಾ ತಿಳಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!