ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುದುರೆಮುಖ ವ್ಯಾಪ್ತಿಯ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಭದ್ರಾ ನದಿ ಅಪಾಯದ ಮಟ್ಟ ದಾಟುತ್ತಿದೆ.
ಹೆಬ್ಬಾಳೆ ಸೇತುವೆಯು ಭದ್ರಾ ನದಿ ಅಬ್ಬರಕ್ಕೆ ಮುಳುಗಡೆಯಾಗಿದೆ. ಮಳೆಗಾಲದಲ್ಲಿ ಇದೇ ಮೊದಲ ಬಾರಿಗೆ ಕಳಸ ತಾಲೂಕಿನ ಹೊರನಾಡು ಬಳಿಯ ಹೆಬ್ಬಾಳೆ ಸೇತುವೆ ಜಲಾವೃತಗೊಂಡಿದೆ.
ಸೇತುವೆಯ ಪ್ರವಾಹದಿಂದಾಗಿ ಕಳಸದೊಂದಿಗಿನ ಸಂಪರ್ಕವು ಅಡಚಣೆಯಾಗಿದೆ. ನಿನ್ನೆ ಸಂಜೆಯಿಂದ ಸೇತುವೆ ಮೇಲೆ ಭದ್ರಾ ನದಿ ಹರಿಯುತ್ತಿದೆ.
ಮುಂಜಾಗ್ರತಾ ಕ್ರಮವಾಗಿ ಸೇತುವೆಯ ಎರಡೂ ಬದಿಯಲ್ಲಿ ಬ್ಯಾರಿಕೇಡ್‌ಗಳನ್ನು ನಿರ್ಮಿಸಿ ವಾಹನ ಸಂಚಾರ ನಿಷೇಧಿಸಲಾಗಿದೆ. ಕಳಸ ಪೊಲೀಸರು ಸೇತುವೆ ಬಳಿ ಮೊಕ್ಕಾಂ ಹೂಡಿದ್ದಾರೆ.