ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಬಲ ಬೆಲೆ ಕಾನೂನು ಜಾರಿ, ರೈತರಿಗೆ ಪಿಂಚಣಿ ವ್ಯವಸ್ಥೆ ಸೇರಿ ಇನ್ನಿತರ ಬೇಡಿಕೆಗಳನ್ನು ಇಟ್ಟುಕೊಂಡು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಇಂದು ರೈತರು ಮತ್ತೆ ದೆಹಲಿಗೆ ಪ್ರವೇಶಿಸಲು ಪ್ರಯತ್ನ ಮಾಡಿದ್ದು, ಹರ್ಯಾಣ ಪೊಲೀಸರು ರೈತರ ಮೇಲೆ ಆಶ್ರುವಾಯು, ಜಲಫಿರಂಗಿ ಪ್ರಯೋಗ ಮಾಡಿದ್ದಾರೆ. ಲಘು ಲಾಠಿ ಪ್ರಹಾರ ನಡೆದಿದ್ದು, ಇದನ್ನು ಖಂಡಿಸಿ ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ರೈತರು ನಿರ್ಧರಿಸಿದ್ದಾರೆ.
ಎಲ್ಲಾ ಸಂಘಟನೆಗಳು ಸ್ವಯಂ ಪ್ರೇರಿತವಾಗಿ ಶುಕ್ರವಾರ ಬೆಳಗ್ಗೆ 11 ರಿಂದ ರಾತ್ರಿ 1 ಗಂಟೆವರೆಗೂ ಬಂದ್ ಚಳವಳಿ ನಡೆಸಲಿವೆ.