ಹಿಮಾಚಲದಲ್ಲಿ ಮೇಘಸ್ಪೋಟ: ರೌದ್ರಾವತಾರ ತಾಳಿದ ಗಿರಿ ನದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:‌ 

ಬುಧವಾರ ಹಿಮಾಚಲ ಪ್ರದೇಶದಲ್ಲಿ ಮೇಘಸ್ಪೋಟ ಸಂಭವಿಸಿದ್ದು, ಸಿರ್ಮೌರ್ ಜಿಲ್ಲೆಯ ಗಿರಿ ನದಿಯ ನೀರಿನ ಮಟ್ಟ ಗಣನೀಯವಾಗಿ ಏರಿಕೆ ಕಂಡಿದೆ. ನದಿಯ ನೀರು ಉಕ್ಕಿ ಹರಿದು ಜನವಸತಿ ಪ್ರದೇಶಗಳು ಮುಳುಗಡೆಯಾಗಿವೆ.

ಜೂನ್ 24 ರಂದು ಮುಂಗಾರು ಪ್ರಾರಂಭವಾದಾಗಿನಿಂದ ಹಿಮಾಚಲ ಪ್ರದೇಶದಲ್ಲಿ ಮಳೆ, ಪ್ರವಾಹ ಮತ್ತು ಭೂಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 223 ಕ್ಕೆ ತಲುಪಿದೆ.

ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಮಳೆಯ ದುರಂತಗಳಲ್ಲಿ 295 ಜನರು ಗಾಯಗೊಂಡಿದ್ದು, 800 ಮನೆಗಳು ಸಂಪೂರ್ಣ ಹಾನಿಗೀಡಾಗಿವೆ. ಇನ್ನೂ 7,500 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಹಲವಾರು ಸ್ಥಳೀಯ ಸಂಸ್ಥೆಗಳು, ಶಾಲೆಗಳು ಮತ್ತು ಸಮುದಾಯ ಕೇಂದ್ರಗಳು ಸಹ ಹಾನಿಗೊಳಗಾಗಿವೆ ಎಂದು ಕಂದಾಯ ಸಚಿವ ಜಗತ್ ಸಿಂಗ್ ನೇಗಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!