ಶಬರಿಮಲೆ ಭಕ್ತರಿಗೆ ನೀರು, ಆಹಾರ ಸೌಲಭ್ಯ: ದೇವಸ್ವಂ ಮಂಡಳಿಗೆ ಹೈಕೋರ್ಟ್ ನಿರ್ದೇಶನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ ಶಬರಿಮಲೆಯಲ್ಲಿ ಭಕ್ತರ ಸಂಕಷ್ಟ ಗಮನಿಸಿರುವ ಕೇರಳ ಹೈಕೋರ್ಟ್, ಭಕ್ತರಿಗೆ ನೀರು, ಆಹಾರ ಹಾಗೂ ಇತರ ಸೌಲಭ್ಯಗಳನ್ನು ಒದಗಿಸುವಂತೆ ತಿರುವಾಂಕೂರು ದೇವಸ್ವಂ ಮಂಡಳಿಗೆ ನಿರ್ದೇಶನ ನೀಡಿದೆ.

ಶಬರಿಮಲೆಗೆ ಬರುವ ಯಾತ್ರಾರ್ಥಿಗಳು ರಸ್ತೆಗಳಲ್ಲಿ ಗಂಟೆಗಳ ಕಾಲ ಆಹಾರ ಮತ್ತು ನೀರಿಲ್ಲದೆ ಪರದಾಡುತ್ತಿದ್ದಾರೆ. ಎಡತಾವಲಮಗಳಲ್ಲಿ ಅವರಿಗೆ ಅಗತ್ಯ ನೀರು, ಆಹಾರ ಸೌಲಭ್ಯ ಒದಗಿಸಬೇಕು, ಜೊತೆಗೆ ಇದನ್ನು ಖಚಿತಪಡಿಸಿಕೊಳ್ಳಬೇಕು ಎಂದು ನ್ಯಾಯಪೀಠವು ಸೂಚಿಸಿದೆ.

ಇನ್ನು ದೇಗುಲ ಹಾಗೂ ಅದರ ಸುತ್ತಮುತ್ತಲಿನಲ್ಲಿ ಜನಸಂದಣಿ ನಿಯಂತ್ರಿಸಲು ಕ್ರಮ ವಹಿಸಬೇಕು, ಅಗತ್ಯವಿದ್ದರೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದು ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!