Friday, September 22, 2023

Latest Posts

ನೀರು ಬಿಡುವ ಸ್ಥಿತಿಯಲ್ಲಿಲ್ಲ, ಮುಂದೇನು ಮಾಡೋದು? ಪ್ರಧಾನಿ ಮೋದಿಗೆ ಪತ್ರ ಬರೆಯಲು ನಿರ್ಧರಿಸಿದ ಸಿಎಂ ಸಿದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಸಭೆ ಕರೆದಿದ್ದು, ಇದೀಗ ಈ ಬಗ್ಗೆ ಪ್ರಧಾನಿ ಮೋದಿಗೆ ಪತ್ರ ಬರೆಯುವ ನಿರ್ಧಾರಕ್ಕೆ ಬಂದಿದ್ದಾರೆ.

ರಾಜ್ಯದಲ್ಲಿ ಮಳೆ ಕೊರತೆಯಾಗಿದೆ, ತಮಿಳುನಾಡಿಗೆ ನೀರು ಬಿಡುವ ಸ್ಥಿತಿಯಲ್ಲಿ ನಾವಿಲ್ಲ. ನಿತ್ಯ ೫೦೦೦ ಕ್ಯುಸೆಕ್ ನೀರು ಹರಿಸುವಂತೆ ಕಾವೇರಿ ನಿರ್ವಹಣಾ ಸಮಿತಿ ಆದೇಶ ನೀಡಿದೆ. ಇದನ್ನು ಮರುಪರಿಶೀಲನೆ ಮಾಡುವಂತೆ ಮನವಿ ಮಾಡಲು ನಿರ್ಧರಿಸಿದ್ದೇವೆ. ನಮ್ಮ ಸ್ಥಿತಿ ಏನಿದೆಯೋ ಅದನ್ನು ಸಂಪೂರ್ಣವಾಗಿ ವಿವರಿಸಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯುತ್ತೇವೆ.

ಎಲ್ಲ ಪಕ್ಷದವರು ಒಗ್ಗಟ್ಟಾಗಿ ಸಮಿತಿಯ ಮುಂದೆ ಮತ್ತೊಂದು ಅರ್ಜಿ ಹಾಕುತ್ತೇವೆ, ಸುಪ್ರೀಂ ಕೋರ್ಟ್‌ಗೆ ವಾಸ್ತವಾಂಶ ತಿಳಿಸುತ್ತೇವೆ. ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಎಗ ತೆರಳಿ ಕಾನೂನು ತಜ್ಞರ ಜೊತೆ ಚರ್ಚೆ ನಡೆಸುತ್ತಾರೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!