September 19, 2026
Saturday, September 19, 2026
spot_img

KRSನಲ್ಲಿ ನೀರಿನ ಮಟ್ಟ ಕುಸಿತ! ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗಕ್ಕೆ ‘ಜಲ ಸಂಕಷ್ಟ’

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಬೇಸಿಗೆಯ ತಾಪಮಾನ ಹೆಚ್ಚಾಗುತ್ತಿದ್ದಂತೆ ಇದೀಗ ನೀರಿನ ಸಮಸ್ಯೆಯ ಭೀತಿ ಕೂಡ ಗಂಭೀರವಾಗುತ್ತಿದೆ.

ಪ್ರಮುಖ ಜಲಮೂಲವಾಗಿರುವ ಕೃಷ್ಣರಾಜ ಸಾಗರ ಅಣೆಕಟ್ಟಿನ ನೀರಿನ ಮಟ್ಟ ಗಣನೀಯವಾಗಿ ಇಳಿದಿದ್ದು, ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗದ ಜನರಲ್ಲಿ ಆತಂಕ ಹೆಚ್ಚಿಸಿದೆ. ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗಳಿಗೆ ಸಾಕಾಗುವಷ್ಟು ನೀರು ಉಳಿಯುತ್ತದೆಯೇ ಎಂಬ ಪ್ರಶ್ನೆ ಎದುರಾಗಿದೆ.

124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಜಲಾಶಯದಲ್ಲಿ ಸದ್ಯ ಸುಮಾರು 90 ಅಡಿ ನೀರು ಮಾತ್ರ ಉಳಿದಿದೆ. ಒಟ್ಟು 16 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿರುವ ಡ್ಯಾಂನಲ್ಲಿ 7 ಟಿಎಂಸಿ ಡೆಡ್ ಸ್ಟೋರೇಜ್ ಆಗಿರುವುದರಿಂದ ಕೇವಲ 9 ಟಿಎಂಸಿ ನೀರಷ್ಟೇ ಬಳಕೆಗೆ ಲಭ್ಯವಿದೆ. ಈ ಪ್ರಮಾಣವೇ ಈಗ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಇದನ್ನೂ ಓದಿ:

ಬೆಂಗಳೂರು, ಮೈಸೂರು ಹಾಗೂ ಮಂಡ್ಯ ಭಾಗಗಳಿಗೆ ಕುಡಿಯುವ ನೀರು ಪೂರೈಸುವುದರ ಜೊತೆಗೆ ರೈತರ ಬೆಳೆ ರಕ್ಷಣೆಗೂ ನೀರು ಬಿಡಬೇಕಾಗಿದೆ. ಇದರೊಂದಿಗೆ ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ಮಾಡುವ ಜವಾಬ್ದಾರಿಯೂ ರಾಜ್ಯದ ಮೇಲಿದೆ.

ಮುಂಗಾರು ಮಳೆ ವಿಳಂಬವಾದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಇದೆ. ಇದೀಗ ಅಣೆಕಟ್ಟಿನ ನೀರನ್ನು ಜಾಗರೂಕತೆಯಿಂದ ಬಳಸುವ ಅಗತ್ಯ ಎದುರಾಗಿದೆ. ನೀರಿನ ಮಟ್ಟ ಇಳಿಕೆಯಿಂದ ಸರ್ಕಾರ ಹಾಗೂ ನೀರಾವರಿ ಇಲಾಖೆ ಕಟ್ಟುನಿಟ್ಟಿನ ನಿರ್ವಹಣೆಯತ್ತ ಗಮನ ಹರಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !