ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೇಸಿಗೆಯಲ್ಲಿ ಜನರು ನೀರಿಗಾಗಿ ಪರದಾಡುತ್ತಿದ್ದಾರೆ, ಈ ನಡುವೆ ಬಿಡಬ್ಲ್ಯುಎಸ್ಎಸ್ ಬಿ ನಿರೀಕ್ಷೆಯಂತೆಯೇ ನೀರಿನ ದರ ಹೆಚ್ಚಳ ಮಾಡುವುದನ್ನು ಸ್ಪಷ್ಟಪಡಿಸಿದೆ.
ಬೆಲೆ ಏರಿಕೆ ಬಗ್ಗೆ ಮಾತನಾಡಿರುವ ಬಿಡಬ್ಲ್ಯುಎಸ್ಎಸ್ ಬಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್, ಗೃಹ ಬಳಕೆ ಕನೆಕ್ಷನ್ಗೆ ಲೀಟರ್ ಗೆ ಗರಿಷ್ಠ ಒಂದು ಪೈಸೆ ಹೆಚ್ಚಳವಾಗಲಿದೆ ಎಂದು ತಿಳಿಸಿದ್ದಾರೆ. ಬೆಲೆ ಏರಿಕೆಯ ಪರಿಣಾಮವಾಗಿ ಒಟ್ಟಾರೆಯಾಗಿ ಗೃಹ ಬಳಕೆದಾರರಿಗೆ ತಿಂಗಳಿಗೆ 20-30 ರೂ. ಹೆಚ್ಚುವರಿ ಹೊರೆಯಾಗುವ ಸಾಧ್ಯತೆ ಇದೆ. ನೀರು ಬಳಕೆಯ ಆಧಾರದ ಮೇಲೆ ಸ್ಲ್ಯಾಬ್ಗಳನ್ನು ನಿಗದಿಪಡಿಸಲಾಗಿದ್ದು, ಎಷ್ಟು ಬಳಕೆಗೆ ಎಷ್ಟು ದರ ಏರಿಕೆಯಾಲಿದೆ ಎಂಬ ಬಗ್ಗೆ ರಾಮ್ ಪ್ರಸಾತ್ ಮನೋಹರ್ ವಿವರಗಳನ್ನು ನೀಡಿದ್ದಾರೆ.
0-8 ಸಾವಿರದೊಳಗೆ ಸ್ಲ್ಯಾಬ್ಗೆ ಲೀಟರ್ಗೆ 0.15 ಪೈಸೆ ಹೆಚ್ಚಳ. 8-25 ಸಾವಿರದೊಳಗಿನ ಸ್ಲ್ಯಾಬ್ಗೆ ಲೀಟರ್ಗೆ 0.40 ಪೈಸೆ, 25 ಸಾವಿರ ಲೀಟರ್ಗಿಂತ ಹೆಚ್ಚು ಬಳಕೆ ಮಾಡಿದ್ರೆ 0.80 ಪೈಸೆ ಏರಿಕೆ, 50 ಸಾವಿರದಿಂದ 1 ಲಕ್ಷ ಲೀಟರ್ ನೀರು ಬಳಕೆಗೆ 1 ಪೈಸೆ ಹೆಚ್ಚಳ.