ಹೊಸ ದಿಗಂತ ವರದಿ, ಹುಬ್ಬಳ್ಳಿ:
ರಾಜ್ಯದಲ್ಲಿ 500 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು, ನೀರು ಕೊಡಲಾಗದ ಸರ್ಕಾರವಿದ್ದರೆ ಏನು ಪ್ರಯೋಜನ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ಹರಿಹಾಯ್ದರು.
ತಾಲೂಕಿನ ಛಬ್ಬಿ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೀರಿನ ಬಗ್ಗೆ ಕಳೆದ ವಾರ ಸ್ವತಃ ನಾನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದಿದ್ದೇನೆ. ಈ ವಾರವೂ ಮಳೆಯಾಗಿಲ್ಲ. ಬರಗಾಲದ ಮುನ್ಸೂಚನೆ ಕಾಣುತ್ತಿದ್ದು, ಸರ್ಕಾರ ಈ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ಎಂದರು.
ಹಿಂದೆ ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಕೇವಲ ವಿಡಿಯೋ ಕಾನ್ಪರೆನ್ಸ್ ಮಾಡಿ ಸುಮ್ಮನಾಗಿದ್ದಾರೆ. ಬರಗಾಲ ಎದುರಾದ ಕಡೆ ಟಾಸ್ಕ್ ಪೋಸ್೯ ರಚನೆ ಮಾಡಿ ಸಮಸ್ಯೆ ಪರಿಹರಿಸಲು ಮುಂದಾಗಬೇಕು ಎಂದು ತಿಳಿಸಿದರು.
ಗ್ಯಾರಂಟಿ ಭ್ರಮೆ ಹುಟ್ಟಿಸಿದ್ದು ನೋಡಿದರೆ, ಸರಕಾರದ ಜನ ಪ್ರೀಯತೆ ಬಹಳ ದಿನ ಉಳಿಯಲ್ಲ. ನೀರು ಕೊಡದ ಸರಕಾರ ತಗೆದುಕೊಂಡು ಏನು ಮಾಡಬೇಕು ಎಂದರು.
ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ ಅಕ್ಕಿ ಬರಲ್ಲ ಅಂತ ಕುಂಟು ನೆಪ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ. ಇದೀಗ ಛತ್ತೀಸಗಡದಿಂದ ಅಕ್ಕಿ ತರುತ್ತೇವೆ ಎನ್ನುತ್ತಿದ್ದಾರೆ. ನಮಗೆ ಬಡ ಜನರಿಗೆ ಒಳ್ಳೆಯದಾದರೆ ಸಾಕು ಎಂದರು.
ಅಕ್ಕಿಯನ್ನು ಎಲ್ಲಿಂದ ತೆಗೆದುಕೊಳ್ಳಬೇಕು, ಹೇಗೆ ತೆಗೆದುಕೊಳ್ಳಬೇಕು ಎನ್ನುವ ಪ್ರಶ್ನೆ ಇದೆ. ರಾಜ್ಯದ ರೈತರು ಅಕ್ಕಿ ಕೊಡುವುದಕ್ಕೆ ಮುಂದೆ ಬಂದರೆ ಅದನ್ನು ಖರೀದಿ ಮಾಡಬೇಕು. ಬಿಜೆಪಿಯವರೇ ಕೊಡಸಿ ಎನ್ನುವುದು ಸರಿಯಲ್ಲ. ಒಂದು ವೇಳೆ ಒಂದನೇ ತಾರೀಖಿಗೆ ಅಕ್ಕಿ ಕೊಡದೆ ಹೋದರೆ, ನಾವು ಪ್ರತಿಭಟನೆ ಮಾಡುತ್ತೇವೆ ಎಂದರು.
ಇನ್ನು ಇದೇ ವೇಳೆ ಅಧಿವೇಶನಕ್ಕೂ ಮುಂಚೆ ವಿಪಕ್ಷ ನಾಯಕನ ಆಯ್ಕೆ ಮಾಡಲಾಗುತ್ತದೆ.