ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಐಜಿಐ ವಿಮಾನ ನಿಲ್ದಾಣದಿಂದ ಇಂಡಿಗೊ ಪರೀಕ್ಷಾ ವಿಮಾನವು ತಾಂತ್ರಿಕ ಮೌಲ್ಯಮಾಪನಕ್ಕಾಗಿ ಸೋಮವಾರ ನೋಯ್ಡಾದ ಜೇವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.
ಇಲ್ಲಿ ಎಲ್ಲಾ ಭದ್ರತಾ ತಪಾಸಣೆಗಳನ್ನು ಪೂರ್ಣಗೊಳಿಸಿದ ಬಳಿಕ ವಿಮಾನವನಂಯ್ ಜೇವರ್ ವಿಮಾನ ನಿಲ್ದಾಣದಲ್ಲಿ ಇಳಿಯಲು ನಾಗರಿಕ ವಿಮಾನಯಾನ ನಿರ್ದೇಶನಾಲಯವು ಅನುಮತಿ ನೀಡಿತು. ಈ ವೇಳೆ ಇಂಡಿಗೊ ವಿಮಾನಕ್ಕೆ ವಾಟರ್ ಸೆಲ್ಯೂಟ್ ನೀಡಲಾಯಿತು.
ಐಜಿಐ ವಿಮಾನ ನಿಲ್ದಾಣದಿಂದ ಹೊರಟ ನಂತರ, ಪರೀಕ್ಷಾ ವಿಮಾನವು ಕೆಲವೇ ನಿಮಿಷಗಳಲ್ಲಿ ಜೇವರ್ ವಿಮಾನ ನಿಲ್ದಾಣಕ್ಕೆ ಬಂದಿತು. ಅಂತಿಮವಾಗಿ ವಿಮಾನ ನಿಲ್ದಾಣದಲ್ಲಿ ಇಳಿಯುವ ಮೊದಲು, ವಿಮಾನವು ಒಂದೂವರೆಯಿಂದ ಎರಡು ಗಂಟೆಗಳ ಕಾಲ ಗಾಳಿಯಲ್ಲಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.