ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದ ಜೈಪುರದಲ್ಲಿ ಮಳೆಯಿಂದಾಗಿ ದುರಂತ ಸಂಭವಿಸಿದ್ದು, ಮನೆಯೊಂದರ ನೆಲಮಾಳಿಗೆಯಲ್ಲಿ ನೀರು ತುಂಬಿ ಮೂರು ವರ್ಷದ ಮಗು ಸೇರಿ ಮೂವರು ಮೃತಪಟ್ಟಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಆರಂಭವಾದ ಏಳು ಗಂಟೆಗಳ ಬಳಿಕ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಜೈಪುರದಲ್ಲಿ ಮಳೆಯಿಂದಾಗಿ ನೆಲಮಾಳಿಗೆಯು ಜಲಾವೃತವಾಗಿತ್ತು. ಸಂತ್ರಸ್ತರು ಸಕಾಲದಲ್ಲಿ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ಮಳೆಯ ನೀರಿನಲ್ಲಿ ಮುಳುಗಿದ್ದಾರೆ.
ಮನೆಯ ನೆಲಮಾಳಿಗೆಯಲ್ಲಿ ನೀರು ತುಂಬಿ ಮೃತಪಟ್ಟವರನ್ನು ಪೂರ್ವಿ (3), ಪೂಜಾ (19), ಮತ್ತು ಕಮಲ್ (24) ಎಂದು ಗುರುತಿಸಲಾಗಿದೆ.
ಬಿಹಾರ ಮೂಲದ ಕಮಲ ಮತ್ತು ಪೂಜಾ ದಿನಗೂಲಿ ಕಾರ್ಮಿಕರಾಗಿದ್ದು, ನಗರದ ವಿಶ್ವಕರ್ಮ ಪ್ರದೇಶದಲ್ಲಿ ವಾಸವಾಗಿದ್ದರು. ಜೈಪುರದಲ್ಲಿ ಭಾರೀ ಮಳೆ ಮುಂದುವರೆದಿದ್ದು, ಅಧಿಕಾರಿಗಳು ಎಲ್ಲಾ ಶಾಲೆಗಳು ಮತ್ತು ಹಲವಾರು ಕಚೇರಿಗಳನ್ನು ಮುಚ್ಚಲು ಆದೇಶಿಸಿದ್ದಾರೆ.