ಸಿಲಿಕಾನ್ ಸಿಟಿ ಜನರಿಗೆ ವಾಟರ್ ಶಾಕ್: ಕಾರು, ಬೈಕ್ ತೊಳೆದವರಿಗೆ ಬಿತ್ತು ದಂಡ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಬೆಂಗಳೂರು ಜಲಮಂಡಳಿಯ ದಂಡ ಅಭಿಯಾನ ಶುರು ಮಾಡಿದ್ದೂ, ಕುಡಿಯುವ ನೀರಿನ ಅನಗತ್ಯ ಪೋಲು ಮಾಡಿದರೆ ದಂಡ ಕಟ್ಟಬೇಕಾಗಿದೆ.

ಕಳೆದ ಒಂದು ವಾರದಲ್ಲಿ ಸಿಲಿಕಾನ್ ಸಿಟಿಯಲ್ಲಿ 112 ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ. ಕುಡಿಯುವ ನೀರನ್ನು ಅನಗತ್ಯ ಪೋಲು ಮಾಡಿದವರಿಂದ 5.60 ಲಕ್ಷ ರೂಪಾಯಿಗಳ ದಂಡ ವಸೂಲಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಅಧ್ಯಕ್ಷರಾದ ಡಾ.ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮುಂಬರುವ ಬೇಸಿಗೆಯಲ್ಲಿ ಎಲ್ಲರಿಗೂ ಶುದ್ದ ಕುಡಿಯುವ ನೀರನ್ನು ಸಮರ್ಪಕವಾಗಿ ಸರಬರಾಜು ಮಾಡುವ ನಿಟ್ಟಿನಲ್ಲಿ ಫೆಬ್ರವರಿ 17, 2025 ರಂದು, ಕುಡಿಯುವ ನೀರನ್ನು ಅನಗತ್ಯ ಪೋಲು ಮಾಡದಂತೆ ಜಲಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿತ್ತು.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ – 1964 ರ ಕಲಂ 33 ಮತ್ತು 34 ರ ಅನುಸಾರ ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು, ವಾಹನಗಳ ಸ್ವಚ್ಚತೆಗೆ, ಕೈದೋಟಕ್ಕೆ, ಕಟ್ಟಡ ನಿರ್ಮಾಣಕ್ಕೆ, ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ, ಸಿನಿಮಾ ಮಂದಿರ ಮತ್ತು ಮಾಲುಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆಗೆ, ರಸ್ತೆ ನಿರ್ಮಾಣ ಹಾಗೂ ಸ್ವಚ್ಚತೆಗೆ ಶುದ್ದ ಕುಡಿಯುವ ನೀರಿನ ಬಳಕೆಯನ್ನು ಮಾಡುವುದನ್ನು ನಿಷೇಧಿಸಲಾಗಿತ್ತು. ಆದರೆ, ಸಾರ್ವಜನಿಕರು ಮುಂಬರುವ ನೀರಿನ ಕೊರತೆಯನ್ನು ಕಡೆಗಣಿಸಿ, ನಿಷೇಧಿಸಿರುವಂತಹ ಕಾರ್ಯಗಳಿಗೆ ಶುದ್ದ ನೀರಿನ ಬಳಕೆಯನ್ನು ಇನ್ನೂ ಮುಂದುವರೆಸಿರುವುದು ಸರಿಯಲ್ಲ. ಕಳೆದ 7 ದಿನಗಳಲ್ಲಿ ನಮ್ಮ ಮಂಡಳಿ ಸಿಬ್ಬಂದಿಗಳು ಕುಡಿಯುವ ನೀರನ್ನು ಪೋಲು ಮಾಡಿದವರ ವಿರುದ್ದ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿದ ದಂಡ ವಸೂಲಿ ಮಾಡಲು ಮುಂದಾಗಿದ್ದೇವೆ ಎಂದು ಜಲಮಂಡಳಿ ಅಧ್ಯಕ್ಷರಾದ ಡಾ ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಫೆಬ್ರವರಿ 23 ರ ವರೆಗೆ ಒಟ್ಟಾರೆಯಾಗಿ 112 ಪ್ರಕರಣಗಳನ್ನು ದಾಖಲಿಸಲಾಗಿದೆ. ದಕ್ಷಿಣ ವಲಯದಲ್ಲಿ ಹೆಚ್ಚು ಪ್ರಕರಣಗಳು (33) ದಾಖಲಾಗಿವೆ. ಉತ್ತರ ವಲಯದಲ್ಲಿ 23, ಪಶ್ಚಿಮ ವಲಯದಲ್ಲಿ 28, ಪೂರ್ವ ವಲಯದಲ್ಲಿ 28 ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರಕ್ಕೆ ಸುಮಾರು 100 ಕಿಲೋಮೀಟರ್‌ಗಳ ದೂರದಿಂದ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಅಂತರ್ಜಲ ಕುಸಿತದಿಂದ ನೀರಿನ ಕೊರತೆ ಹೆಚ್ಚಾಗಬಹುದು ಎನ್ನುವ ಎಚ್ಚರಿಕೆಯಿಂದ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!