ರಾಜ್ಯದಲ್ಲಿ ಜಲಕ್ಷಾಮ, ಚುನಾವಣೆ ಮುಂದೂಡುವಂತೆ ವಾಟಾಳ್ ನಾಗರಾಜ್​ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುತ್ತಿವೆ. ಯಾರೂ ಕಾವೇರಿ ನೀರಿನ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಹೀಗಾಗಿ ಚುನಾವಣೆ ಮುಂದೂಡುವಂತೆ ಹೋರಾಟಗಾರ ವಾಟಾಳ್ ನಾಗರಾಜ್ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದರು.

ನೀರಿಗಾಗಿ ಆಗ್ರಹಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ಮೈಸೂರು ಬ್ಯಾಂಕ್ ವೃತ್ತದಲ್ಲಿ ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನೀರಿಲ್ಲ. ಎಲ್ಲೆಲ್ಲೂ ಅವ್ಯವಸ್ಥೆ ಇದೆ. ಇದೇ ರೀತಿ ಮುಂದುವರಿದರೆ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯುತ್ ಮತ್ತು ಆಡಳಿತ ಸಮಿತಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿದೆ. ಬೆಂಗಳೂರಿನಲ್ಲಿ ಕುಡಿಯಲು ನೀರಿಲ್ಲ, ನೀರಿನ ಹಾಹಾಕಾರ ಶುರುವಾಗಿದೆ. ಯಾರೂ ಕಾವೇರಿ ನೀರಿನ ಬಗ್ಗೆ ಮಾತನಾಡುತ್ತಿಲ್ಲ. ಇದೇ ರೀತಿ ಮುಂದುವರಿದರೆ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!