Monday, November 28, 2022

Latest Posts

ರಾಜಧಾನಿ ದೆಹಲಿ, ಮುಂಬೈನಲ್ಲಿ ಭಾರೀ ಮಳೆ: ಹಲವು ಪ್ರದೇಶಗಳು ಜಲಾವೃತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತಡರಾತ್ರಿ ಶುರುವಾದ ಮಳೆ ಶನಿವಾರದ ಮುಂಜಾನೆವರೆಗೂ ನಿರಂತರವಾಗಿ ಸುರಿದ ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಮುಂಬೈ ಜನರನ್ನು ಹೈರಾಣಾಗಿಸಿದೆ. ಮುಂಬೈ ಹಾಗೂ ದೆಹಲಿಯ ಹಲವು ಪ್ರದೇಶಗಳು ಜಲಾವೃತವಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು. ಇನ್ನೂ ಎರಡು ದಿನಗಳ ಕಾಲ ಎರಡೂ ಮಹಾ ನಗರಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ನಗರ (ಮುಂಬೈ) ಮತ್ತು ಉಪನಗರಗಳಲ್ಲಿ ಸಾಧಾರಣದಿಂದ ಭಾರೀ ಮಳೆ/ಗುಡುಗು ಆಗಲಿದ್ದು, ಪ್ರಸ್ತುತ ಮೋಡ ಕವಿದ ವಾತಾವರಣವಿದೆ ಎಂದು ಹವಾಮಾನ ಇಲಾಖೆ ಶನಿವಾರ ಬೆಳಗ್ಗೆ ತಿಳಿಸಿದೆ. ಮುಂಬೈನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ದೆಹಲಿಯಲ್ಲಿ ಶನಿವಾರ ಮತ್ತು ಭಾನುವಾರದಂದು ತಾಪಮಾನವು ಸುಮಾರು 28 ಡಿಗ್ರಿ ಸೆಲ್ಸಿಯಸ್‌ನಲ್ಲಿ ತಲುಪುವ ನಿರೀಕ್ಷೆಯಿದೆ. ವಾರಾಂತ್ಯದಲ್ಲಿ ಸಾಧಾರಣ ಮಳೆ ಮತ್ತು ಸೋಮವಾರ ಲಘು ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.

ಜೊತೆಗೆ ಉತ್ತರಾಖಂಡ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಪೂರ್ವ ರಾಜಸ್ಥಾನದಲ್ಲಿ ಮುಂದಿನ ನಾಲ್ಕರಿಂದ ಐದು ದಿನಗಳಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ತಮಿಳುನಾಡು, ಕರ್ನಾಟಕದ ಒಳ ಭಾಗಗಳು, ಕರಾವಳಿ, ಆಂಧ್ರಪ್ರದೇಶ ಮತ್ತು ರಾಯಲಸೀಮದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!