ಹೊಸದಿಗಂತ ವರದಿ ಹಾಸನ :
ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ವಾಟರ್‌ಮ್ಯಾನ್ ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಬೇಲೂರು ತಾಲ್ಲೂಕಿನ, ಚೀಕನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಗಣೇಶ (27) ಕೊಲೆಯಾದ ವಾಟರ್‌ಮ್ಯಾನ್. ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ವಾಟರ್‌ಮ್ಯಾನ್ ಆಗಿದ್ದ ಗಣೇಶ ನಿನ್ನೆ ರಾತ್ರಿ ಚೀಕನಹಳ್ಳಿ ಗ್ರಾಮದ ಆಟೋ ನಿಲ್ದಾಣದ ಬಳಿ ನಿಂತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ಗಣೇಶನ ಜೊತೆ ಇದೇ ಗ್ರಾಮದ ರೌಡಿಶೀಟರ್ ಮಧು ಜಗಳ ತೆಗೆದಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿ ಮಧು ವಾಟರ್ ಮ್ಯಾನ್ ಗಣೇಶನಿಗೆ ಚಾಕುವಿನಿಂದ ಇರಿದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಗಣೇಶ ಮೃತಪಟ್ಟಿದ್ದಾನೆ.
ಗೌರಿ-ಗಣೇಶ ಹಬ್ಬಕ್ಕೆ ಗ್ರಾಮಕ್ಕೆ ಬಂದಿದ್ದ ರೌಡಿಶೀಟರ್ ಮಧು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಗಣೇಶ್ ಮೃತದೇಹವನ್ನು ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.