ವಯನಾಡ್ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್  ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ  ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಚುನಾವಣಾ ಕಣಕ್ಕಿಳಿಯಲಿದ್ದಾರೆ.

ಪ್ರಿಯಾಂಕಾ ಗಾಂಧಿ ಉಮೇದುವಾರಿಕೆ ಕುರಿತು ಮಾತನಾಡಿದ ರಾಹುಲ್ ಗಾಂಧಿ, ವಯನಾಡಿನ ಜನರು ನನ್ನ ಹೃದಯದಲ್ಲಿ ವಿಶೇಷ ಸ್ಥಾನವನ್ನು ಹೊಂದಿದ್ದಾರೆ. ನನ್ನ ಸಹೋದರಿ ಪ್ರಿಯಾಂಕಾ ಗಾಂಧಿಗಿಂತ ಉತ್ತಮ ಪ್ರತಿನಿಧಿಯನ್ನು ನಾನು ಊಹಿಸಲು ಸಾಧ್ಯವಿಲ್ಲ. ವಯನಾಡಿನ ಅಗತ್ಯತೆಗಳು ಮತ್ತು ಸಂಸತ್ತಿನಲ್ಲಿ ಪ್ರಬಲ ಧ್ವನಿಯಾಗಲಿದ್ದು, ಚಾಂಪಿಯನ್ ಆಗುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಉತ್ತರ ಪ್ರದೇಶದ  ರಾಯ್ ಬರೇಲಿ ಮತ್ತು ಕೇರಳದ ವಯನಾಡ್‌ನಿಂದ ಸ್ಪರ್ಧೆ ಮಾಡಿದ್ದ ರಾಹುಲ್ ಗಾಂಧಿ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರು. ಬಳಿಕ ರಾಯ್ ಬರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಂಡ ರಾಹುಲ್ ಗಾಂಧಿ, ವಯನಾಡ್ ಕ್ಷೇತ್ರವನ್ನು ತೆರವು ಮಾಡಿದ್ದರು. ಈ ಹಿನ್ನಲೆ ವಯನಾಡ್‌ನಲ್ಲಿ ಉಪ ಚುನಾವಣೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!