ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಸುಗಮವಾಗಿ ಸಾಗಿದ್ದು, ಕೆಲವೇ ಗಂಟೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 13 ರಂದು ಉಪಚುನಾವಣೆ ನಡೆದಿತ್ತು. ಸಹೋದರಿ ಪ್ರಿಯಾಂಕಾ ಗಾಂಧಿ ಅವರು ತಮ್ಮ ಹಿರಿಯ ಸಹೋದರ ರಾಹುಲ್ ಗಾಂಧಿ ಅವರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿಂತಿದ್ದರು.
ಪ್ರಸ್ತುತ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಅವರು ವಯನಾಡ್ ಕ್ಷೌರದಲ್ಲಿ ಭಾರಿ ಮುನ್ನಡೆ ಸಾಧಿಸಿದ್ದಾರೆ. ಪ್ರಿಯಾಂಕಾ ಗಾಂಧಿ ಅವರು ಒಟ್ಟು 78,360 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ನವ್ಯಾ ಹರಿದಾಸ್ ಅವರಿಗಿಂತ ಪ್ರಿಯಾಂಕಾ 45,830 ಮತಗಳಿಂದ ಮುಂದಿದ್ದಾರೆ.