October 18, 2026
Sunday, October 18, 2026
spot_img

ಮೇಘಸ್ಫೋಟಕ್ಕೆ ತತ್ತರಿಸಿದ ವಯನಾಡು: ಕಾರ್ಮಿಕರಿಬ್ಬರ ಸಾ*ವು, 30 ಮಂದಿ ನಾಪತ್ತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಯನಾಡಿನ ಮೆಪ್ಪಾಡಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಭೂಕುಸಿತದಿಂದಾಗಿ ಇಬ್ಬರು ಕಾರ್ಮಿಕರು ಜೀವಂತ ಸಮಾಧಿಯಾಗಿದ್ದಾರೆ.

ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಸಂಭವಿಸಿದೆ. ಇದರಿಂದ ಇಬ್ಬರು ಕಾರ್ಮಿಕರು ಜೀವಂತ ಸಮಾಧಿಯಾಗಿದ್ದಾರೆ. ಸುಮಾರು 20 ಮಂದಿ ಅವಶೇಷಗಳ ಅಡಿಯಲ್ಲೇ ಸಿಲುಕಿಕೊಂಡಿದ್ದು, 30 ಮಂದಿ ನಾಪತ್ತೆಯಾಗಿದ್ದಾರೆ. ಇದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಗಾಯಗೊಂಡಿದ್ದ 6 ಮಂದಿಯನ್ನ ಸ್ಥಳೀಯರು ರಕ್ಷಣೆ ಮಾಡಿದ್ದು, ಮೆಪ್ಪಾಡಿಯ ಡಾ. ಮೂಪೆನ್ಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಗಾಯಗೊಂಡವರನ್ನ ಹೀರಾ ಸುರೇಶ್, ದಿಲೀಪ್, ಸೂರಜ್, ಸಂಜಯ್ ಥಾಪುರ್, ರಜನೀಶ್ ಮತ್ತು ತನ್ಮಯ್ ಘೋಷ್ ಎಂದು ಗುರುತಿಸಲಾಗಿದೆ. ಒಬ್ಬರ ಸ್ಥಿತಿ ಗಂಭೀರವಾಗಿದೆ.

Must Read