ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಮುಂಜಾನೆ ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ ಕನಿಷ್ಠ 36 ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಕ್ಕೂ ಹೆಚ್ಚು ಜನರು ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಕೇಂದ್ರ ಮತ್ತು ರಾಜ್ಯ ಅಧಿಕಾರಿಗಳು ಭಾರಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಗ್ನಿಶಾಮಕ ಸೇವೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ENRF) ತಂಡಗಳನ್ನು ಪೀಡಿತ ಪ್ರದೇಶಗಳಿಗೆ ನಿಯೋಜಿಸಲಾಗಿದೆ ಎಂದು ಕೇರಳ ವಿಪತ್ತು ನಿರ್ವಹಣಾ ಪ್ರಾಧಿಕಾರ (KACMA) ತಿಳಿಸಿದೆ.
KACMA ಫೇಸ್‌ಬುಕ್ ಪೋಸ್ಟ್‌ನಲ್ಲಿ, ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ಕಣ್ಣೂರು ರಕ್ಷಣಾ ಭದ್ರತಾ ದಳವನ್ನು ನಿಯೋಜಿಸಲಾಗಿದೆ ಎಂದು ಹೇಳಿದೆ.