ಹೊಸದಿಗಂತ ಡಿಜಿಟಲ್ ಡೆಸ್ಕ್:
ವಯನಾಡಿನ ಕೆಲವು ಭಾಗಗಳಲ್ಲಿ ಭೂಕುಸಿತದ ನಂತರ ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಕೇರಳ ಸರ್ಕಾರಕ್ಕೆ ಭರವಸೆ ನೀಡಿದ್ದಾರೆ.
“ವಯನಾಡಿನ ಕೆಲವು ಭಾಗಗಳಲ್ಲಿ ಭೂಕುಸಿತದಿಂದ ಸಂಕಷ್ಟಕ್ಕೀಡಾಗಿದೆ. ನನ್ನ ಆಲೋಚನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರೆಲ್ಲರ ಜೊತೆಯಲ್ಲಿವೆ ಮತ್ತು ಗಾಯಗೊಂಡವರಿಗೆ ಗುಣಮುಖರಾಗಲು ಪ್ರಾರ್ಥಿಸುತ್ತೇನೆ. ಎಲ್ಲಾ ಸಂತ್ರಸ್ತರಿಗೆ ಸಹಾಯ ಮಾಡಲು ಪ್ರಸ್ತುತ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಕೇರಳ ಸಿಎಂ ಶ್ರೀ @pinarayivijayan ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಅಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ಭರವಸೆ ನೀಡಿದ್ದೇವೆ” ಎಂದು ಪ್ರಧಾನಿ ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಭೂಕುಸಿತಗಳು ಸಂಭವಿಸಿದ್ದು, ನೂರಾರು ಜನರು ಸಿಲುಕಿರುವ ಆತಂಕವಿದೆ. ಭಾರೀ ಭೂಕುಸಿತದಲ್ಲಿ ಈವರೆಗೆ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.