ಹೊಸದಿಗಂತ ಡಿಜಿಟಲ್ ಡೆಸ್ಕ್:
ವರ್ಲ್ಡ್ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ ಲೀಗ್ನ ಎರಡನೇ ಆವೃತ್ತಿ ನಿನ್ನೆಯಿಂದ ಅಂದರೆ ಜುಲೈ 18 ರಿಂದ ಆರಂಭವಾಗಿದೆ. ಆಪರೇಷನ್ ಸಿಂಧೂರ್ ಬಳಿಕ ಉಭಯ ದೇಶಗಳ ಕ್ರಿಕೆಟ್ ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾಗುತ್ತಿರುವದರಿಂದ ಪಂದ್ಯದ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ ಪಂದ್ಯ ಭಾನುವಾರ ಅಂದರೆ ಜುಲೈ 20 ರಂದು ನಡೆಯಲಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ ಪಂದ್ಯವು ಭಾರತೀಯ ಸಮಯ ರಾತ್ರಿ 9:00 ಗಂಟೆಗೆ ಪ್ರಾರಂಭವಾಗುತ್ತದೆ. ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ವಿಶ್ವ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ ಪಂದ್ಯ ಪ್ರಸಾರವಾಗಲಿದೆ.