ಹೊಸದಿಗಂತ ಡಿಜಿಟಲ್ ಡೆಸ್ಕ್:
2025 ರ ಐಪಿಎಲ್‌ನಲ್ಲಿ ಆಡಿರುವ ಎರಡೂ ಪಂದ್ಯಗಳನ್ನು ಗೆದ್ದುಕೊಂಡಿರುವ ಆರ್ಸಿಬಿ ಇದೀಗ ಮತ್ತೊಂದು ಸಿಹಿ ಸುದ್ದಿ ಕೊಟ್ಟಿದೆ. ತನ್ನ ಎರಡನೇ ಪಂದ್ಯದಲ್ಲಿ ಸಿಎಸ್ಕೆ ತಂಡವನ್ನು ಸೋಲಿಸಿದ ಆರ್ಸಿಬಿ ಇದೀಗ ಸೋಶಿಯಲ್ ಮೀಡಿಯಾ ಇನ್ಸ್ಟಾಗ್ರಾಮ್ನಲ್ಲೂ ಚೆನ್ನೈ ತಂಡವನ್ನು ಹಿಂದಿಕ್ಕಿ ನಂ.1 ಸ್ಥಾನದಲ್ಲಿದೆ.
ಇನ್ಸ್ಟಾಗ್ರಾಮ್ನಲ್ಲಿ ಅತ್ಯಧಿಕ ಫಾಲೋವರ್ಸ್ಗಳನ್ನು ಹೊಂದಿರುವ ಐಪಿಎಲ್ ತಂಡಗಳ ಪೈಕಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಗ್ರಸ್ಥಾನದಲ್ಲಿತ್ತು. ಆದರೆ ಈ ಸೀಸನ್ನಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ಸಿಎಸ್ಕೆ ತಂಡ ಇನ್ಸ್ಟಾಗ್ರಾಮ್ನಲ್ಲಿ ತನ್ನ ಫಾಲೋವರ್ಸ್ ಸಂಖ್ಯೆಯಲ್ಲಿ ಕುಸಿತ ಕಂಡಿದೆ.
ಪ್ರಸ್ತುತ ಸಿಎಸ್ಕೆ ಫ್ರಾಂಚೈಸಿ ತನ್ನ ಅಧಿಕೃತ ಇನ್ಸ್ಟಾಗ್ರಾಮ್ನಲ್ಲಿ 17.7 ಮಿಲಿಯನ್ ಫಾಲೋವರ್ಸ್ಗಳನ್ನು ಹೊಂದಿದ್ದು, ಐಪಿಎಲ್ನ ಮತ್ತೊಂದು ಜನಪ್ರಿಯ ತಂಡವಾದ ಆರ್ಸಿಬಿ ಮೊದಲ ಸ್ಥಾನಕ್ಕೇರಿದೆ.
ಹೌದು, ಪ್ರಸ್ತುತ ಆರ್ಸಿಬಿ 17.8 ಮಿಲಿಯನ್ ಪಾಲೋವರ್ಸ್ಗಳನ್ನು ಹೊಂದಿದ್ದು, ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಇದ್ರಿಂದ RCB ಅಭಿಮಾನಿಗಳಿಗೆ ಮತ್ತಷ್ಟು ಖುಷಿ ಹೆಚ್ಚಾಗಿದೆ.