ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಪ್ರವಾಸಿಗರ ಮೇಲಿನ ದಾಳಿಗೆ ಸಂಬಂಧಿಸಿದಂತೆ ಅಮೆರಿಕ, ಯುರೋಪ್, ಫ್ರಾನ್ಸ್, ರಷ್ಯಾ, ಸೌದಿ ಅರೇಬಿಯಾ ಸೇರಿದಂತೆ ಜಗತ್ತಿನ ಬಹುತೇಕ ದೇಶಗಳು ಭಾರತದ ಪರವಾಗಿ ನಿಂತಿವೆ. ಮಾತ್ರವಲ್ಲ ದಾಳಿಯನ್ನು ತೀವ್ರವಾಗಿ ಖಂಡಿಸಿವೆ.
ಸದ್ಯ ಘಟನೆಗೆ ಸಂಬಂಧಿಸಿದಂತೆ ಅಮೆರಿಕ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಮೃತರಿಗೆ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ತುಳಸಿ ಗಬ್ಬಾರ್ಡ್, ಪಹಲ್ಗಾಮ್‌ನಲ್ಲಿ 26 ಹಿಂದೂಗಳನ್ನು ಗುರಿಯಾಗಿಸಿಕೊಂಡು ನಡೆದ ಭೀಕರ ಇಸ್ಲಾಮಿಕ್ ಭಯೋತ್ಪಾದಕ ದಾಳಿಯ ಹಿನ್ನೆಲೆಯ ಸಂದರ್ಭದಲ್ಲಿ ನಾವು ಭಾರತದೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ. ಪ್ರೀತಿ ಪಾತ್ರರಾದ ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಾವಿದ್ದೇವೆ.
ಅಷ್ಟೇ ಅಲ್ಲ, ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಎಲ್ಲಾ ಜನರಿಗೆ ನಮ್ಮ ಹೃದಯಪೂರ್ವಕ ಸಂತಾಪಗಳು. ಈ ಘೋರ ದಾಳಿಗೆ ಕಾರಣರಾದವರನ್ನು ನೀವು ಬೇಟೆಯಾಡುತ್ತಿರುವಾಗ ನಾವು ನಿಮ್ಮೊಂದಿಗಿದ್ದೇವೆ ಮತ್ತು ನಿಮ್ಮನ್ನು ಬೆಂಬಲಿಸುತ್ತೇವೆ ಎಂದು ಪೋಸ್ಟ್ ಮಾಡಿದ್ದಾರೆ.