ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದ ಕುರಿತು ಕೇಂದ್ರ ಸರ್ಕಾರದ ನಿರ್ಧಾರಕ್ಕೆ ನಾವು ಬದ್ಧವಿರುವುದಾಗಿ ಗುರುವಾರ ವಿಧಾನಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಿಳಿಸಿದರು.
ನೆರೆಯ ದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ಉದ್ವಿಗ್ನತೆ ಹೆಚ್ಚುತ್ತಿರುವಾಗ ಮಮತಾ ಬ್ಯಾನರ್ಜಿ ಅವರ ಪ್ರತಿಕ್ರಿಯೆಯು ಮಹತ್ವ ಪಡೆದುಕೊಂಡಿದೆ.
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ಕಿರುಕುಳದ ವಿರುದ್ಧ ಪ್ರಬಲವಾಗಿ ಪ್ರತಿಭಟಿಸಿದ ಮಮತಾ ಬ್ಯಾನರ್ಜಿ ಅವರು, ಯಾವುದೇ ಧರ್ಮದ ದಬ್ಬಾಳಿಕೆಯನ್ನು ನಾವು ಎಂದಿಗೂ ಒಪ್ಪಿಕೊಳ್ಳಲು ಸಾಧ್ಯವಿಲ್ಲಎಂದು ಹೇಳಿದರು. ಅಷ್ಟೇ ಅಲ್ಲ, ಬಾಂಗ್ಲಾದೇಶದ ಪರಿಸ್ಥಿತಿಯ ಬಗ್ಗೆ ಇಸ್ಕಾನ್ ಮುಖ್ಯಸ್ಥರೊಂದಿಗೆ ಎರಡು ಬಾರಿ ದೂರವಾಣಿ ಮೂಲಕ ಮಾತನಾಡಿದ್ದೇನೆ ಎಂದೂ ಈ ವೇಳೆ ಹೇಳಿದ್ದಾರೆ.
ಬಾಂಗ್ಲಾದೇಶ ಬೇರೆ ದೇಶ. ಭಾರತ ಸರ್ಕಾರ ಅದನ್ನು ಪರಿಶೀಲಿಸುತ್ತದೆ. ಅದು ನಮ್ಮ ಅಧಿಕಾರ ವ್ಯಾಪ್ತಿಗೆ ಬರುವುದಿಲ್ಲ. ನಾವು ಅದರ ಬಗ್ಗೆ ಮಾತನಾಡಬಾರದು ಅಥವಾ ಮಧ್ಯಪ್ರವೇಶಿಸಬಾರದು., ನಮಗೆ ಒಳಗೊಳಗೆ ವಿಷಾದವಿದ್ದರೂ, ನಾವು ಕೇಂದ್ರದ ನೀತಿಗಳನ್ನು ಅನುಸರಿಸುತ್ತೇವೆ ಎಂದು ಅವರು ಹೇಳಿದರು.