ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾನು ಬಹಳ ಕ್ಲಿಯರ್ ಆಗಿದ್ದೇನೆ. ಮುಡಾ ಹಗರಣದಲ್ಲಿ ನನ್ನದಾಗಲಿ, ಮುಖ್ಯಮಂತ್ರಿಗಳ ಪತ್ನಿಯವರದಾಗಲಿ ಪಾತ್ರ ಸೊನ್ನೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸ್ಪಷ್ಟಪಡಿಸಿದ್ದಾರೆ.
ಜಾರಿ ನಿರ್ದೇಶನಾಲಯದ ನೋಟಿಸ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಆ ರೀತಿ ಪಾತ್ರ ಇಲ್ಲ ಎಂದು ಒಪ್ಪಿಕೊಂಡು ಕೋರ್ಟ್ ತಡೆ ನೀಡಿದೆ. ಫೆ.10 ರ ನಂತರ ನೋಡೋಣ ಎಂದು ಹೇಳಿದ್ದಾರೆ.
ನಾನು ನ್ಯಾಯಾಂಗ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟುಕೊಂಡಿದ್ದೇನೆ. ನ್ಯಾಯಾಲಯದ ಆದೇಶವನ್ನು ನಾವು ಪಾಲಿಸುತ್ತೇವೆ ಎಂದು ಹೇಳಿದರು.