Monday, November 28, 2022

Latest Posts

‘ನಾವು ಮರಳಿ ಬರುತ್ತಿದ್ದೇವೆ’: ಹಿಮಾಚಲ ಪ್ರದೇಶದಲ್ಲಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಇಂದು ಮತದಾನ ನಡೆಯುತ್ತಿರುವ ಹಿಮಾಚಲ ಪ್ರದೇಶ ಚುನಾವನೆಯಲ್ಲಿ ಗೆದ್ದು ಕಾಂಗ್ರೆಸ್‌ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲಿದೆ ಎಂದು ಹಿಮಾಚಲ ಪ್ರದೇಶ ಕಾಂಗ್ರೆಸ್ ನಾಯಕರಾದ ವಿಕ್ರಮಾದಿತ್ಯ ಮತ್ತು ಪ್ರತಿಭಾ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು.
ನಾವು ಗೆಲ್ಲುವ ವಿಶ್ವಾಸವಿದೆ ಎಂದು ರಾಜ್ಯ ಪಕ್ಷದ ಮುಖ್ಯಸ್ಥೆ ಪ್ರತಿಭಾ ಸಿಂಗ್ ಹೇಳಿದ್ದಾರೆ. ಸಿಎಂ ಮುಖವನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಅವರು ಹೇಳಿದರು. ಏತನ್ಮಧ್ಯೆ, ಬಿಜೆಪಿ ನೇತೃತ್ವದ ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸದೇ ಇರುವದರಿಂದ ಇಲ್ಲಿ ಕಾಂಗ್ರೆಸ್‌ ಗೆಲವು ನಿಶ್ಚಿತವಾಗಿದೆ ಎಂದು ವಿಕ್ರಮಾದಿತ್ಯ ಹೇಳಿದ್ದಾರೆ.
“ನಾವು ಮರಳಿ ಅಧಿಕಾರಕ್ಕೆ ಬರುವುದು 100 ಪ್ರತಿಶತ ಖಚಿತವಾಗಿದೆ. ಹಿಂದಿನ ಸರ್ಕಾರವು 2017 ರ ಚುನಾವಣೆಯ ಸಮಯದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲಿಲ್ಲ. ಜೈರಾಮ್ ಠಾಕೂರ್ ಅವರ ಸರ್ಕಾರದೊಂದಿಗೆ ಜನರಿಗೆ ನಂಬಿಕೆಯ ಕೊರತೆಯಿದೆ” ಎಂದು ಅವರು ಹೇಳಿದ್ದಾರೆ.
ಹಿಮಾಚಲ ಪ್ರದೇಶ ವಿಧಾನಸಭೆಯ 68 ಸ್ಥಾನಗಳಿಗೆ ಶನಿವಾರ ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದೆ. ಸಂಜೆ 5ರವರೆಗೆ ಮತದಾನ ನಡೆಯಲಿದೆ. ಒಂದೇ ಹಂತದ ಚುನಾವಣೆಯ ಫಲಿತಾಂಶ ಡಿಸೆಂಬರ್ 8 ರಂದು ಪ್ರಕಟವಾಗಲಿದೆ. ರಾಜ್ಯದ 55 ಲಕ್ಷಕ್ಕೂ ಹೆಚ್ಚು ಮತದಾರರು 412 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!