Wednesday, June 7, 2023

Latest Posts

ನಮ್ಮ ಗ್ಯಾರೆಂಟಿ ಯೋಜನೆಗಳನ್ನು ಕಾರ್ಯಗತಗೊಳಿಸುತ್ತೇವೆ-ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಾಳೆ ರಾಜ್ಯದ ಸಿಎಂ, ಡಿಸಿಎಂ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿರುವ ಬೆಂಗಳೂರಿನ ಶ್ರೀಕಂಠೀರವ ಸ್ಟೇಡಿಯಂಗೆ ತಮ್ಮ ನಿವಾಸದಿಂದ ಹೊರಡುವ ಮುಂಚೆ ಮಾತನಾಡಿದ ನಿಯೋಜಿತ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕಾಂಗ್ರೆಸ್‌ ಪಕ್ಷ ನೀಡಿರುವ ಗ್ಯಾರೆಂಟಿ ಯೋಜನೆಗಳನ್ನು ಕಾರ್ಯಗತಗೊಳಿಸುವುದಾಗಿ ತಿಳಿಸಿದರು.

ಬಳಿಕ ಅಲ್ಲಿಂದ ಹೊರಟ ಡಿಕೆಶಿ ಮೇ 20 ರಂದು ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸಿದ್ಧತೆಗಳನ್ನು ಪರಿಶೀಲಿಸಿದರು. ಇದಾದ ಬಳಿಕ ಇಂದು ಮತ್ತೆ ದೆಹಲಿಗೆ ತೆರಳಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!