ದರ್ಶನ್ ನಂತಹ ನಿಜ ಜೀವನದ ಖಳನಾಯಕರನ್ನು ಸೃಷ್ಟಿಸಿದ ನಾವು ತಪ್ಪಿತಸ್ಥರು: ಚೇತನ್ ಅಹಿಂದಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 
 
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೊಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಇತ್ತ ನಿಜ ಜೀವನದಲ್ಲಿ ನಟ ದರ್ಶನ್ ನಂತಹ ಖಳನಾಯಕನನ್ನು ಸೃಷ್ಠಿಸಿದ ನಾವೇ ತಪ್ಪಿತಸ್ಥರು ಎಂಬುದಾಗಿ ನಟ ಚೇತನ್ ಅಹಿಂದಾ ಅವರು ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿರುವ ಅವರು, ನಟ ದರ್ಶನ ಮತ್ತು ಆತನ ಸಹಚರರ ವಿರುದ್ಧ ಕೊಲೆ ಆರೋಪಗಳು ಗಂಭೀರವಾಗಿವೆ. ನಮ್ಮ ರಾಜ್ಯ ಪೊಲೀಸರು ಅದಕ್ಕೆ ಅನುಗುಣವಾಗಿ ತನಿಖೆ ನಡೆಸುತ್ತಾರೆ ಎಂದು ನಾವು ನಂಬುತ್ತೇವೆ.ಅಲ್ಲದೆ, ಚಲನಚಿತ್ರ ತಾರೆಯರು ಸುಮಾರು ಒಂದು ಶತಮಾನದಿಂದ ಅವರು ಪಡೆದಿರುವ ಜೀವನಕ್ಕಿಂತ ದೊಡ್ಡ ಸ್ಥಾನಮಾನಕ್ಕೆ ಅರ್ಹರಲ್ಲ. ಇಂತಹ ನಿಜ ಜೀವನದ ಖಳನಾಯಕರನ್ನು ಸೃಷ್ಟಿಸಿದವರು ನಾವು ಒಂದು ಸಮಾಜವಾಗಿ ತಪ್ಪಿತಸ್ಥರು ಎಂಬುದಾಗಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!