ರಾಜ್ಯದಲ್ಲಿ ನಡೆಯುತ್ತಿರುವ ವಿಪಕ್ಷಗಳ ಯಾತ್ರೆ ಬಗ್ಗೆ ನಮಗೆ ಯಾವುದೇ ಚಿಂತೆಯಿಲ್ಲ: ಉಸ್ತುವಾರಿ ಸಚಿವ ಕೆ.ಸಿ.ನಾರಾಯಣ ಗೌಡ

ಹೊಸದಿಗಂತ ವರದಿ ಶಿವಮೊಗ್ಗ:
ರಾಜ್ಯದಲ್ಲಿ ನಡೆಯುತ್ತಿರುವ ವಿಪಕ್ಷಗಳ ಯಾತ್ರೆ ಬಗ್ಗೆ ನಮಗೆ ಯಾವುದೇ ಚಿಂತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣ ಗೌಡ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ ಯಾವುದೇ ಪರಿಣಾಮ ಉಂಟು ಮಾಡಿಲ್ಲ. ಅವರ ಯಾತ್ರೆಯಿಂದ ನಮ್ಮ ಸಂಘಟನೆ ಮೇಲೆ ಏನೂ ಪ್ರಭಾವ ಉಂಟಾಗಿಲ್ಲ ಎಂದರು.

ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಹಾಗೂ ಪಕ್ಷಕ್ಕೆ ಒಳ್ಳೆಯ ಕೊಡುಗೆಗಳನ್ನು ನೀಡುತ್ತಿದ್ದಾರೆ. ಇದನ್ನು ಸಹಿಸಲು ಕೆಲವರಿಂದ ಆಗುತ್ತಿಲ್ಲ. ಹೀಗಾಗಿ ಪ್ರಧಾನಿ ಮತ್ತು ಬಿಜೆಪಿ ವಿರುದ್ಧ ನಿರಂತರ ಟೀಕೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!