ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಭವನದಿಂದ ಮಾಹಿತಿ ಸೋರಿಕೆ ಕುರಿತು ತನಿಖೆಗೆ ನಾವು ಸಿದ್ಧ. ಅದಕ್ಕೆ ರಾಜ್ಯಪಾಲರು ಅನುಮತಿ ಕೊಡಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಭವನದಲ್ಲಿ ಮಾಹಿತಿ ಸೋರಿಕೆ ಆಗುತ್ತಿದ್ದರೆ ಅದಕ್ಕೆ ರಾಜಭವನವೇ ಹೊಣೆ.ರಾಜಭವನದ ಆವರಣದೊಳಗೆ ಯಾರಿಗೂ ಹೋಗಲು ಸಾಧ್ಯವಾಗುವುದಿಲ್ಲ. ಅತ್ಯುತ್ಕೃಷ್ಟವಾದ ಭದ್ರತಾ ವಲಯ ಎಂದು ಪರಿಗಣಿಸಿದ್ದೇವೆ. ರಾಜಭವನದಿಂದ ಅನೇಕ ಪತ್ರಗಳು ಬರುತ್ತಿವೆ. ಇದನ್ನು ತನಿಖೆ ಮಾಡಿ ಎಂದು ಪತ್ರ ಬರೆದರೆ ತನಿಖೆ ಮಾಡಲು ನಾವು ಸಿದ್ಧರಿದ್ದೇವೆ ಎಂದರು.
ತನಿಖೆಗೆ ರಾಜ್ಯಪಾಲರು ಅನುಮತಿ ಕೊಟ್ಟರೆ ಪೊಲೀಸರು ತೆರಳಿ ರಾಜಭವನದ ಅಧಿಕಾರಿಗಳನ್ನು ವಿಚಾರಣೆಗೊಳಪಡಿಸಿ ಯಾರಿಂದ ಮಾಹಿತಿ ಸೋರಿಕೆಯಾಗುತ್ತಿದೆ ಎಂದು ಪತ್ತೆ ಹಚ್ಚುತ್ತಾರೆ ಎಂದು ಹೇಳಿದರು.
ರಾಜ್ಯಪಾಲರಿಗೆ ಅಗತ್ಯ ಮಾಹಿತಿ ನೀಡಲು ರಾಜ್ಯ ಸರ್ಕಾರದ ವಿರೋಧವಿಲ್ಲ. ಆದರೆ ಸಂಪುಟದ ಗಮನಕ್ಕೆ ಬಂದು ವರದಿ ನೀಡುವುದರಿಂದ ಹೊಣೆಗಾರಿಕೆ ಹೆಚ್ಚಿರುತ್ತದೆ ಎಂದರು.