Wednesday, June 29, 2022

Latest Posts

ನಾವು ಬೀದಿಗೆ ಬಂದಿಲ್ಲ, ಶಾಸಕರು, ಸಚಿವರಾಗಿದ್ದೇವೆ: ಹೆಚ್.ಡಿ.ಕೆ ಗೆ ಸಚಿವ ಎಸ್.ಟಿ.ಸೋಮಶೇಖರ್ ತಿರುಗೇಟು

ಹೊಸ ದಿಗಂತ ವರದಿ,  ಮೈಸೂರು:

ಜೆಡಿಎಸ್-ಕಾಂಗ್ರೆಸ್ ಸಮಿಶ್ರ ಸರ್ಕಾರ ಪತನವಾದ ಬಳಿಕ ನಾವೇನು ಬೀದಿಗೆ ಬಂದಿಲ್ಲ, ಶಾಸಕರಾಗಿ ಆಯ್ಕೆಯಾಗಿ ಸಚಿವರಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ತಿರುಗೇಟು ನೀಡಿದರು.
ವಿಪಕ್ಷ ನಾಯಕರಾಗಲು ಸಿದ್ದರಾಮಯ್ಯ ಸಮಿಶ್ರ ಸರ್ಕಾರ ಕೆಡವಿ 23 ಮಂದಿಯನ್ನು ಬೀದಿಗೆ ತಂದರು ಎಂದು ಮೈಸೂರಿನಲ್ಲಿ ಮಂಗಳವಾರ ಜೆಡಿಎಸ್‌ನ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಿ, ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮಿಶ್ರ ಸರ್ಕಾರ ಬಿದ್ದು ಹೋಗುವುದಕ್ಕೆ ಯಾರು ಕಾರಣರು ಎಂದು ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನಾಗಿ ಗೊತ್ತಿದೆ. ಪದೇ ಪದೇ ಈ ವಿಷಯವನ್ನು ಪ್ರಸ್ತಾಪಿಸಿ, ಅದನ್ನೇ ಚುನಾವಣೆಗಳಲ್ಲಿ ಬಂಡವಾಳ ಮಾಡಿಕೊಳ್ಳುವುದನ್ನು ಹೆಚ್.ಡಿ.ಕುಮಾರಸ್ವಾಮಿ ಬಿಡಬೇಕು ಎಂದು ಟಾಂಗ್ ನೀಡಿದರು.
ಜೆಡಿಎಸ್-ಬಿಜೆಪಿ ಸಮಿಶ್ರ ಸರ್ಕಾರ ಪತನಗೊಳ್ಳುವುದಕ್ಕೆ ಕಾರಣವೇನು ಎಂಬುದೆಲ್ಲಾ ಹೆಚ್.ಡಿ.ಕುಮಾರಸ್ವಾಮಿಗೆ ಗೊತ್ತಿದೆ. ನಾವ್ಯಾರು ಬೀದಿಗೆ ಬಂದಿಲ್ಲ, ಬಿಜೆಪಿಗೆ ಹೋಗಿ ಶಾಸಕರಾಗಿ ಆಯ್ಕೆಯಾಗಿ ಸಚಿವರಾಗಿದ್ದೇವೆ, ಒಂದೊAದು ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಕೆಲಸ ಮಾಡುತ್ತಿದ್ದೇವೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss