Monday, September 1, 2025

ನಿಮ್ಮೊಂದಿಗೆ ನಾವಿದ್ದೇವೆ: ಧರ್ಮಸ್ಥಳದ ಸೌಜನ್ಯ ಮನೆಮಂದಿಗೆ ಬಿಜೆಪಿ ರಾಜ್ಯಾಧ್ಯಕ್ಷರ ಅಭಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಧರ್ಮಸ್ಥಳ ಗ್ರಾಮದಲ್ಲಿ ಹತ್ಯೆಗೊಳಗಾದ ವಿದ್ಯಾರ್ಥಿನಿ ಸೌಜನ್ಯ ಅವರ ಮನೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಸಹಿತ ಬಿಜೆಪಿಯ ವಿವಿಧ ನಾಯಕರು ಸೋಮವಾರ ಭೇಟಿ ನೀಡಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಮನೆಮಂದಿಗೆ ಧೈರ್ಯ ತುಂಬಿದ್ದಾರೆ.

ಈ ಸಂದರ್ಭ ಮಾತನಾಡಿದ ಬಿ.ವೈ. ವಿಜಯೇಂದ್ರ, ಸೌಜನ್ಯ ಮೇಲೆ ನಡೆದಿರುವ ಭೀಕರ ಅತ್ಯಾಚಾರದ ಪೈಶಾಚಿಕ ಕೃತ್ಯ ಖಂಡನೀಯ. ಘಟನೆ ನಡೆದು 12 ವರ್ಷಗಳಾದರೂ ಅಟ್ಟಹಾಸ ಮೆರೆದ ದುರುಳರು ಶಿಕ್ಷೆಯಿಂದ ತಪ್ಪಿಸಿಕೊಂಡು ತಿರುಗುತ್ತಿರುವುದು ಬಹುದೊಡ್ಡ ವಿಪರ್ಯಾಸ. ಇಂದಿನ ಧರ್ಮಸ್ಥಳ ಚಲೋ ವೇದಿಕೆಯಲ್ಲಿಯೂ ಸೌಜನ್ಯ ಸಾವಿಗೆ ನ್ಯಾಯ ಸಿಗಲು, ಪ್ರಕರಣ ಮರು ತನಿಖೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಲಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿ ತನ್ನ ಸಹಾನುಭೂತಿ ಹಾಗೂ ಬೆಂಬಲ ವ್ಯಕ್ತಪಡಿಸಲು ಸೌಜನ್ಯ ಅವರ ಮನೆಗೆ ತೆರಳಿ ಅವರ ತಾಯಿ ಕುಸುಮಾವತಿ ಅವರನ್ನು ಭೇಟಿಯಾಗಿ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಅಭಯ ನೀಡಿದ್ದೇವೆ ಎಂದಿದ್ದಾರೆ.

ಸೌಜನ್ಯಾ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದಲ್ಲಿ ಅದರ ಪೂರ್ಣ ವೆಚ್ಚದ ಜವಾಬ್ದಾರಿಯನ್ನು ರಾಜ್ಯ ಬಿಜೆಪಿಯೇ ಹೊರಲಿದೆ ಎಂಬುದಾಗಿ ಕುಸುಮಾವತಿ ಅವರಿಗೆ ಭರವಸೆ ನೀಡಿದರು.

ಇದನ್ನೂ ಓದಿ