ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ನಾಳೆಯಿಂದಲೇ 18 ರಿಂದ 44ವರ್ಷ ವಯೋಮಾನದವರಿಗೆ ಕೊರೋನಾ ಲಸಿಕೆ ವಿತರಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ, ಜಯನಗರ ಜನರಲ್ ಆಸ್ಪತ್ರೆ,ಸರ್ ಸಿವಿರಾಮನ್ ಜನರಲ್ ಆಸ್ಪತ್ರೆ, ಇಎಸ್ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಲಸಿಕೆ ನೀಡಲಾಗುವುದು ಎಂದಿದ್ದಾರೆ.
ಇತರೆ ಜಿಲ್ಲೆಗಳಲ್ಲಿಯೂ ಲಸಿಕೆ ವಿತರಣೆ ಮಾಡಲಾಗುವುದು. ಲಸಿಕೆ ಪೂರೈಕೆ ಹೆಚ್ಚಾದಂತೆ ಮುಂದಿನ ದಿನಗಳಲ್ಲಿ ಇನ್ನಷ್ಟು ಲಸಿಕಾ ಕೇಂದ್ರಗಳಲ್ಲಿ ವಿತರಣೆ ಆರಂಭಿಸಲಾಗುವುದು ಎಂದಿದ್ದಾರೆ.