Tuesday, March 28, 2023

Latest Posts

ನಾವು ಮುಚ್ಚಿದ ಲಕೋಟೆಯ ವರದಿ ಸ್ವೀಕರಿಸುವುದಿಲ್ಲ: ಕೇಂದ್ರ ಸರಕಾರದವಿರುದ್ಧ ಸುಪ್ರೀಂ ಅಸಮಾಧಾನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಅದಾನಿ ಅವರು ಷೇರು ಮಾರುಕಟ್ಟೆಯಲ್ಲಿ ಅಕ್ರಮ ಎಸಗಿದ್ದಾರೆ ಎಂಬುದರ ಆರೋಪದ ಕುರಿತು ಕೇಂದ್ರ ಸರ್ಕಾರವು ಮುಚ್ಚಿದ ಲಕೋಟೆಯಲ್ಲಿ ನೀಡಿದ ವರದಿ ಸ್ವೀಕರಿಸಲು ಸುಪ್ರೀಂ ಕೋರ್ಟ್‌ ನಕಾರ ವ್ಯಕ್ತಪಡಿಸಿದೆ.

ಗೌತಮ್‌ ಅದಾನಿ ಕುರಿತು ಹಿಂಡನ್‌ಬರ್ಗ್‌ ಬಹಿರಂಗಪಡಿಸಿದ ವರದಿಯ ಉಲ್ಲೇಖಗಳ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂಬುದಾಗಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯವು ಕೇಂದ್ರದ ಮುಚ್ಚಿದ ಲಕೋಟೆಯ ವರದಿಯನ್ನು ನಿರಾಕರಿಸಿದೆ.

ಭಾರತೀಯ ಹೂಡಿಕೆದಾರರ ಸುರಕ್ಷತೆ ದೃಷ್ಟಿಯಿಂದಾಗಿ ಪ್ರಕರಣದಲ್ಲಿ ಪಾರದರ್ಶಕತೆಯ ಅವಶ್ಯಕತೆ ಇದೆ. ಹಾಗಾಗಿ, ಲಕೋಟೆಯಲ್ಲಿರುವ ಹೆಸರುಗಳು, ವರದಿಗಳನ್ನು ಬಹಿರಂಗವಾಗಿಯೇ ಕೋರ್ಟ್‌ಗೆ ತಿಳಿಸಬೇಕು. ಪ್ರಕರಣದ ಕುರಿತು ಜನರಿಗೆ ಸತ್ಯ ತಿಳಿಯಬೇಕು. ನಾವು ಮುಚ್ಚಿದ ಲಕೋಟೆಯನ್ನು ಸ್ವೀಕರಿಸುವುದಿಲ್ಲ ಎಂದು ಕೋರ್ಟ್‌ ಹೇಳಿತು. ಹಾಗೆಯೇ, ಪ್ರಕರಣದ ಕುರಿತು ತನಿಖೆಗೆ ಸಮಿತಿ ರಚಿಸುವ ಬಗೆಗಿನ ತೀರ್ಪನ್ನು ಕೋರ್ಟ್‌ ಕಾಯ್ದಿರಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!