ಒಂದು ರಾಷ್ಟ್ರ, ಒಂದು ಚುನಾವಣೆಗೆ ನಮ್ಮ ಸಮ್ಮತಿ ಇಲ್ಲ: ಕಾಂಗ್ರೆಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹೈದರಾಬಾದ್ ನಡೆದ ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸದಸ್ಯರ ಸಭೆಯಲ್ಲಿ ಹಲವಾರು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಕಾಂಗ್ರೆಸ್​ ಹೇಳಿದೆ.

ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ, ಕಾಂಗ್ರೆಸ್‌ (Congress) ಪಕ್ಷವು ಪೂರ್ವದಿಂದ ಪಶ್ಚಿಮಕ್ಕೆ ಭಾರತ್ ಜೋಡೋ ಯಾತ್ರೆಯನ್ನು(Bharat Jodo Yatra-2) ನಡೆಸಬೇಕು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರು ಮನವಿ ಮಾಡಿದ್ದಾರೆ. ಇದು ಪರಿಶೀಲನೆಯಲ್ಲಿದೆ ಎಂದು ತಿಳಿಸಿದರು.

ಅದೇ ರೀತಿ ಮೋದಿ ಸರ್ಕಾರದ, ಒಂದು ದೇಶ ಒಂದು ಚುನಾವಣೆಯ ಪ್ರಸ್ತಾಪವನ್ನು ತಿರಸ್ಕರಿಸುವುದಾಗಿ ಹೇಳಿದ್ದಾರೆ.

ಪೂರ್ವದಿಂದ ಪಶ್ಚಿಮಕ್ಕೆ ಭಾರತ್ ಜೋಡೋ ಯಾತ್ರಾ 2 ಅನ್ನು ನಡೆಸಬೇಕು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸದಸ್ಯರು ವಿನಂತಿಸಿದ್ದಾರೆ. ಸಭೆಯಲ್ಲಿ ಕರಡು ನಿರ್ಣಯದ ಬಗ್ಗೆ ಚರ್ಚಿಸಲಾಗುತ್ತಿದೆ . ಚರ್ಚೆಗಳು ಇನ್ನೂ ನಡೆಯುತ್ತಿವೆ. ನಾವು ದೇಶದ ಪರಿಸ್ಥಿತಿಯ ಬಗ್ಗೆ ಚರ್ಚಿಸುತ್ತಿದ್ದೇವೆ. ವಿಶಾಲವಾಗಿ, ಇದನ್ನು ರಾಜಕೀಯ ಪರಿಸ್ಥಿತಿ, ದೇಶ ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟು ಮತ್ತು ದೇಶಕ್ಕೆ ದೊಡ್ಡ ಸವಾಲಾಗಿರುವ ಆಂತರಿಕ ಮತ್ತು ಬಾಹ್ಯ ಭದ್ರತಾ ಬೆದರಿಕೆಗಳು ಎಂದು ವಿಂಗಡಿಸಬಹುದದು ಎಂದು ಹೇಳಿದ್ದಾರೆ.

ಕೇಂದ್ರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ನಡೆ ಕುರಿತು ಮಾತನಾಡಿದ ಚಿದಂಬರಂ, ಇದು ಸಂವಿಧಾನದ ಮೇಲಿನ ದಾಳಿಯಾಗಿದೆ. ನಾವು ಅದನ್ನು ತಿರಸ್ಕರಿಸುತ್ತೇವೆ. ಇದು ಒಕ್ಕೂಟದ ಮೇಲಿನ ದಾಳಿ. ಇದಕ್ಕೆ ಕನಿಷ್ಠ ಐದು ಸಾಂವಿಧಾನಿಕ ತಿದ್ದುಪಡಿಗಳ ಅಗತ್ಯವಿದೆ. ಈ ಸಂವಿಧಾನ ತಿದ್ದುಪಡಿಗಳನ್ನು ಅಂಗೀಕರಿಸಲು ಬಿಜೆಪಿಗೆ ಸಂಖ್ಯಾಬಲವಿಲ್ಲ ಎಂದು ತಿಳಿದಿದೆ. ಆದರೂ ಒಂದು ರಾಷ್ಟ್ರ, ಒಂದು ಚುನಾವಣೆ ಎಂಬ ಮರೀಚಿಕೆಯನ್ನು ಮುಂದಿಟ್ಟಿದ್ದು, ಈಗಿನ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸಲು ಮತ್ತು ಸುಳ್ಳು ನಿರೂಪಣೆಯನ್ನು ಸೃಷ್ಟಿಸಲು ಮಾತ್ರ ಎಂದು ಹೇಳಿದ್ದಾರೆ.

ಸಿಡಬ್ಲ್ಯೂಸಿ ಸಭೆಯಲ್ಲಿ ಸನಾತನ ಧರ್ಮ ವಿವಾದದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಚಿದಂಬರಂ ಸ್ಪಷ್ಟಪಡಿಸಿದ್ದಾರೆ . ಸನಾತನ ಧರ್ಮದ ಬಗ್ಗೆ ಯಾವುದೇ ವಿವಾದಕ್ಕೆ ಸಿಲುಕಲು ಕಾಂಗ್ರೆಸ್ ಸಿದ್ಧವಿಲ್ಲ. ನಾವು ಎಲ್ಲಾ ಧರ್ಮಗಳಿಗೆ ಸಮಾನ ಗೌರವವನ್ನು ಉಳಿಸಿಕೊಂಡಿದ್ದೇವೆ ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!