ನಮಗೇ ನೀರಿಲ್ಲ, ನಿಮಗೆ ಎಲ್ಲಿಂದ ಕೊಡೋದು?: ತಮಿಳುನಾಡಿನ ಬೇಡಿಕೆಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

30 ಸಾವಿರ ಕ್ಯುಸೆಕ್‌ ನೀರು ಬಿಡುವಂತೆ ಆಗ್ರಹಿಸುತ್ತಿರುವ ತಮಿಳುನಾಡಿನ ಬೇಡಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಳ್ಳಿಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಮಗೇ ನೀರಿಲ್ಲ. ಇಂಥ ಸಂಕಷ್ಟದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ಎಲ್ಲಿಂದ ನೀರು ಕೊಡೋದು?’ ಎಂದು ಪ್ರಶ್ನಿಸಿದ್ದಾರೆ.

ಕಾವೇರಿ ನೀರು ಬಿಡುವಂತೆ ತಮಿಳುನಾಡು ಮತ್ತೆ ಕ್ಯಾತೆ ಆರಂಭಿಸಿದೆ. ಈ ಬಾರಿ ಕೇರಳದಲ್ಲಿ ನೀರಿಕ್ಷಿತ ಮಟ್ಟದಲ್ಲಿ ಮಳೆಯಾಗಿಲ್ಲ. ಕೊಡಗಿನಲ್ಲೂ ಮಳೆಯಾಗಿಲ್ಲ. ಹೀಗಾಗಿ ಈ ಸಂಕಷ್ಟವನ್ನು ಎರಡೂ ರಾಜ್ಯಗಳು ಹಂಚಿಕೆ ಮಾಡಿಕೊಳ್ಳಬೇಕಿದೆ. ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿ ತಜ್ಞರ ಜತೆಗೆ ಚರ್ಚಿಸುತ್ತೇನೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!