ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮಗೆ ವಿದ್ಯುನ್ಮಾನ ಮತಯಂತ್ರಗಳ (EVM) ಮೇಲೆ ನಂಬಿಕೆ ಇಲ್ಲ. ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ನಲ್ಲಿ ನಡೆಸುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಆಗ್ರಹಿಸಿದ್ದಾರೆ.
ರಾಷ್ಟ್ರ ರಾಜಧಾನಿಯ ಟಾಲ್ಕಟೋರಾ ಕ್ರೀಡಾಂಗಣದಲ್ಲಿ ಪಕ್ಷದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಖರ್ಗೆ, ನಮಗೆ ಇವಿಎಂ ಮೂಲಕ ಚುನಾವಣೆ ಬೇಡ. ನಾವು ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆಯನ್ನು ಬಯಸುತ್ತೇವೆ. ನಾವು ‘ಭಾರತ್ ಜೋಡೋ ಯಾತ್ರೆ’ ನಡೆಸಿದಂತೆಯೇ, ನಾವು ಬ್ಯಾಲೆಟ್ ಪೇಪರ್‌ಗಳನ್ನು ಬಳಸಿಕೊಂಡು ಚುನಾವಣೆಗಾಗಿ ರಾಷ್ಟ್ರವ್ಯಾಪಿ ಪ್ರಚಾರವನ್ನು ನಡೆಸುತ್ತೇವೆ ಎಂದು ಹೇಳಿದ್ದಾರೆ.